ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎನ್.ಮುನಿರಾಜು ಮುಖ್ಯಭಾಷಣಕಾರರಾಗಿ ಭಾಗವಹಿಸಿ ಮಾತನಾಡಿ, ಬಸವೇಶ್ವರರು, ಅಂಬೇಡ್ಕರ್‌ರರು, ಬಾಬುಜಗಜೀವನರಾಂ ಅವರು ಶೋಷಿತರ ಧ್ವನಿಯಾಗಿ ಕೆಲಸ ಮಾಡಿದರು. 12ನೇ ಶತಮಾನದ ವಚನಕಾರರ ಅಂಶಗಳು ಸಂವಿಧಾನದಲ್ಲಿ ಅಡಕವಾಗಿವೆ. ವಿದ್ಯಾರ್ಥಿಗಳು ವಚನಕಾರರನ್ನು ಓದಿದರೆ ಜೀವನ ಪವನ ಆಗುತ್ತದೆ ಎಂದರು. ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ನಮ್ಮ ಸಂಘಟನೆಯು ನಾಡು, ನುಡಿಗಾಗಿ ಹೋರಾಟ ಮಾಡುವುದರ ಜೊತೆಗೆ ರಾಷ್ಟ್ರನಾಯಕರು, ಮಹನೀಯರ ಜಯಂತಿ ಆಚರಣೆ ಮಾಡುತ್ತದೆ ಅಲ್ಲದೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕೆಲಸ ಮಾಡುತ್ತಿದೆ ಎಂದರು. ನಗರಸಭಾ ಸದಸ್ಯೆ ಕುಮುದಾ ಕೇಶವಮೂರ್ತಿ, ರೋಟರಿ ಸಂಸ್ಥೆ ಅಧ್ಯಕ್ಷ ನಾಗರಾಜು ಮಾತನಾಡಿದರು.
ಸನ್ಮಾನ: ಸಿಮ್ಸ್ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಸ್.ನವೀನ್‌ಚಂದ್ರ, ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ತಜ್ಞರಾದ ಡಾ.ಎ.ಆರ್.ಬಾಬು, ಸಿಡಿಪಿಓ ಟಿ.ಎಂ.ಜಯಶೀಲ,ಮೈಸೂರು ಮಹಾತ್ಮ ಗಾಂಧಿ ಬಿ,ಎಡ್. ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.ಪ್ರತಿಭಾ ಪುರಸ್ಕಾರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾಸಭಾದ ಸಹ ಕಾರ್ಯದರ್ಶಿ ಪಣ್ಯದಹುಂಡಿರಾಜು, ನಿಜಧ್ವನಿಗೋವಿಂದರಾಜು, ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಅರುಣ್ ಕುಮಾರ್‌ಗೌಡ, ರವಿಚಂದ್ರಪ್ರಸಾದ್ ಕಹಳೆ, ಮುತ್ತಿಗೆ ಗೋವಿಂದರಾಜು, ರಾಚಪ್ಪ, ಲಿಂಗರಾಜು, ಮಹೇಶ್‌ಗೌಡ, ಸಿದ್ಧರಾಜು ಇತರರು ಹಾಜರಿದ್ದರು.