ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸ್ಮರಣೆ ನುಡಿನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾದೀಶ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಮನುಷ್ಯನ ಬದುಕಿಗೆ ಬೇಕಾದ ನೀತಿಯನ್ನು ಸಾರಿದ ಮಹಾಚೈತನ್ಯ ಸಿದ್ದೇಶ್ವರ ಸ್ವಾಮಿಗಳ ವಿಚಾರಧಾರೆಗಳು ಸಮಾಜಕ್ಕೆ ಸಾರ್ವಕಾಲಿಕ ಎಂದರು.12ನೇ ಶತಮಾನದ ಬಸವಾದಿ ಶರಣರ ಆದರ್ಶಗಳನ್ನು ತಮ್ಮಲ್ಲಿ ಮೈಗೂಡಿಸಿಕೊಂಡು ವಚನ ಸಾಹಿತ್ಯದ ಪ್ರೇರಕರಾಗಿ ನುಡಿದಂತೆ ನಡೆದಂತಹ ಸಂತ ಶ್ರೇಷ್ಠರು ಶ್ರೀ ಸಿದ್ದೇಶ್ವರ ಸ್ಮಾಮೀಜಿ ಎಂದು ಬಣ್ಣಿಸಿದರು.
ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಿ.ಎಂ.ಹೇಮಂತ್ ಮಾತನಾಡಿ, 12ನೇ ಶತಮಾನದ ಬಸವಾದಿ ಶರಣರ ಬಳಿಕ 21ನೇ ಶತಮಾನದ ನಡೆದಾಡುವ ದೇವರೇ ಆಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಶ್ರೀಸಿದ್ದೇಶ್ವರ ಸ್ವಾಮೀಜಿ ಅವರಂಥಹ ಪ್ರಾತಃಸ್ಮರಣೀಯಯಿಂದಾಗಿ ಈ ನಾಡು ಧನ್ಯವಾಗಿದೆ ಎಂದರು.
ಸಾಹಿತಿ ಕಣಿವೆ ಭಾರದ್ವಾಜ್ ಆನಂದತೀರ್ಥ, ಶರಣ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಬಿ.ನಟರಾಜ್, ಶಾಲಾ ಶಿಕ್ಷಕರಾದ ಶಿವಕುಮಾರ್, ಕಾಂತ, ಕೆ.ಜಿ.ಕಲ್ಪನಾ, ಕೀರ್ತಿ, ದಿವಾಕರ್ ಮತ್ತಿತರರಿದ್ದರು. ವಿದ್ಯಾರ್ಥಿನಿ ಧನ್ಯಶ್ರೀ ವಚನ ಹಾಡಿದರು.