ಬಸವೇಶ್ವರ ಜಯಂತಿ ವಿಜೃಂಭಣೆಯಿಂದ ಆಚರಣೆ

KannadaprabhaNewsNetwork |  
Published : Apr 22, 2026, 01:30 AM IST
 ಬಸವೇಶ್ವರ ಜಯಂತಿ | Kannada Prabha

ಸಾರಾಂಶ

ಶ್ರೀ ಬಸವಣ್ಣನವರ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ನಂದಿ ವಿಗ್ರಹಕ್ಕೆ ರುದ್ರಾಭಿಷೇಕ, ಬಿಲ್ವಪತ್ರೆ, ನಾಗದಳ ಹಾಗೂ ವಿವಿಧ ಪುಷ್ಪಗಳಿಂದ ವಿಶೇಷ ಅರ್ಚನೆ ಸಲ್ಲಿಸಲಾಯಿತು. ಹಸಿರು ಹಾಗೂ ಬಣ್ಣಬಣ್ಣದ ಹೂವಿನ ಅಲಂಕಾರದಿಂದ ಕಂಗೊಳಿಸಿದ್ದ ನಂದಿ ವಿಗ್ರಹ ಭಕ್ತರ ಮನ ಸೆಳೆಯಿತು. ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಮಹಿಳೆಯರು ಹಾಗೂ ಯುವಕರು ಉತ್ಸಾಹದಿಂದ ಪಾಲ್ಗೊಂಡು ಬಸವಣ್ಣನವರಿಗೆ ಜಯಘೋಷಗಳನ್ನು ಮೊಳಗಿಸಿದರು. ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿಯೂ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದರು.

ಅರಸೀಕೆರೆ: ನಗರದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಭಕ್ತಿ ಹಾಗೂ ವೈಭವದಿಂದ ಆಚರಿಸಲಾಗಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಹಾಗೂ ಮೆರವಣಿಗೆಗಳು ಗಮನಸೆಳೆದವು.

ನಗರದ ಶ್ಯಾನುಭೋಗರ ಬೀದಿಯ ಶ್ರೀ ಬಸವಣ್ಣನವರ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ನಂದಿ ವಿಗ್ರಹಕ್ಕೆ ರುದ್ರಾಭಿಷೇಕ, ಬಿಲ್ವಪತ್ರೆ, ನಾಗದಳ ಹಾಗೂ ವಿವಿಧ ಪುಷ್ಪಗಳಿಂದ ವಿಶೇಷ ಅರ್ಚನೆ ಸಲ್ಲಿಸಲಾಯಿತು. ಹಸಿರು ಹಾಗೂ ಬಣ್ಣಬಣ್ಣದ ಹೂವಿನ ಅಲಂಕಾರದಿಂದ ಕಂಗೊಳಿಸಿದ್ದ ನಂದಿ ವಿಗ್ರಹ ಭಕ್ತರ ಮನ ಸೆಳೆಯಿತು. ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಮಹಿಳೆಯರು ಹಾಗೂ ಯುವಕರು ಉತ್ಸಾಹದಿಂದ ಪಾಲ್ಗೊಂಡು ಬಸವಣ್ಣನವರಿಗೆ ಜಯಘೋಷಗಳನ್ನು ಮೊಳಗಿಸಿದರು. ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿಯೂ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಬಲೀಕರಣದ ಹೆಸರಿನಲ್ಲಿ ಮಹಿಳೆಯರಿಗೆ ಅನ್ಯಾಯ: ಶುಭದಾಯಿನಿ
ಕಾಂಗ್ರೆಸ್‌ನ ಅಸಲಿ ಮುಖ ಬಯಲು: ಡಾ.ಸಿ.ಎನ್.ಅಶ್ವತ್ಥನಾರಾಯಣ