ಬಳ್ಳಾರಿ: ನಗರ ಹೊರ ವಲಯದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಜಗಜ್ಯೋತಿ ಬಸವೇಶ್ವರವರ 892ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಜರುಗಿತು.
ವೇದಿಕೆಯಲ್ಲಿ ಉಪಸ್ಥಿತರಿದ್ದ ವಾಣಿಜ್ಯ ನಿಕಾಯದ ಡೀನ ಡಾ.ಸದ್ಯೋಜಾತಪ್ಪ ಮಾತನಾಡಿ, ಮನುಷ್ಯನು ತನ್ನನು ತಾನು ಅರಿತವನೇ ದೇವರು. ಮನುಷ್ಯನು ಎಂದಿಗೂ ತನ್ನ ಮೌಲ್ಯ ಕಳೆದುಕೊಳ್ಳಬಾರದು ಎಂದರು.
ಬಸವಣ್ಣನವರ ವ್ಯಕ್ತಿತ್ವ ಅಳವಡಿಸಿಕೊಂಡರೆ ಮಾತ್ರ ಉತ್ತಮ ಬದುಕನ್ನು ಕಟ್ಟಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.ಜೀವ ವಿಜ್ಞಾನ ನಿಕಾಯದ ಡೀನ ಪ್ರೊ.ಶಶಿಕಾಂತ ಮಜಗಿ, ಸಮಾಜ ವಿಜ್ಞಾನ ನಿಕಾಯದ ಡೀನ ಪ್ರೊ.ಗೌರಿ ಮಾಣಿಕ್ ಮಾನಸ ವೇದಿಕೆಯಲ್ಲಿ ಇದ್ದರು.
ಡಾ.ಕೆ.ಸಿ ಪ್ರಶಾಂತ ಸ್ವಾಗತಿಸಿದರು. ಡಾ. ಶಶಿಧರ ಕೆಲ್ಲೂರ್ ನಿರೂಪಿಸಿ ವಂದಿಸಿದರು.ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.