ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇವಲ 46 ಸದಸ್ಯರೊಂದಿಗೆ 1925ರಲ್ಲಿ ಪ್ರಾರಂಭವಾದ ಬಸವೇಶ್ವರ ಸೊಸೈಟಿ ಈಗ 5,300 ಸದಸ್ಯರಿರುವ ದೊಡ್ಡ ಸೊಸೈಟಿಯಾಗಿ ಬೆಳೆದಿದ್ದು, 14 ಕೋಟಿ ರು. ಠೇವಣಿಯನ್ನು ಸಹ ಹೊಂದಿದೆ. ಇಂತಹ ಸಂಸ್ಥೆಯ ಶತಮಾನೋತ್ಸವದ ಹಿನ್ನೆಲೆಯಲ್ಲಿ ಅಡ್ಡಪಲ್ಲಕ್ಕಿ ಉತ್ಸವ ನಡೆಯುತ್ತಿರುವುದು ಅರ್ಥಪೂರ್ಣವಾಗಿದೆ. ಇಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಆಚರಣೆಗಳ ನೆನಪಿಸುವ ವಿಶೇಷ ಕಾರ್ಯಕ್ರಮವಾಗಿದೆ ಎಂದರು.
35 ವರ್ಷಗಳ ನಂತರ ನಡೆಯುತ್ತಿರುವ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದು, ಇದಕ್ಕಾಗಿ ಅಂತಿಮ ಸಿದ್ಧತೆಗಳು ನಡೆಯುತ್ತಿವೆ ಎಂದರು.ಮೇ 17 ರಂದು ಮಧ್ಯಾಹ್ನ 3 ಗಂಟೆಗೆ ಗಾಂದಿ ಬಜಾರ್‌ನ ಬಸವೇಶ್ವರ ದೇವಾಲಯದ ಆವರಣದಿಂದ ಅಡ್ಡಪಲ್ಲಕ್ಕಿ ಉತ್ಸವ ಆರಂಭವಾಗುವುದು. ಬಿ.ಎಚ್. ರಸ್ತೆ, ನೆಹರೂ ರಸ್ತೆ ಮೂಲಕ ವಿನೋಬನಗರದ ಅಲ್ಲಮಪ್ರಭು ಮೈದಾನಕ್ಕೆ ಅದ್ಧೂರಿ ಮೆರವಣಿಗೆಯೊಂದಿಗೆ ತೆರಳಲಾಗುವುದು.
ಸೊಸೈಟಿ ಶತಮಾನೋತ್ಸವದ ಬಗ್ಗೆ ಮಾಹಿತಿ ನೀಡಿದ ಸ್ವಾಗತ ಸಮಿತಿ ಖಜಾಂಚಿ ಎಸ್.ಪಿ. ದಿನೇಶ್, ಬಸವೇಶ್ವರ ಸೊಸೈಟಿ ಶತಮಾನೋತ್ಸವ ಸಮಾರಂಭವು ಮೇ16 ರಂದು ಬೆಳಗ್ಗೆ 10 ಗಂಟೆಗೆ ಕುವೆಂಪು ರಂಗ ಮಂದಿರದಲ್ಲಿ ನಡೆಯಲಿದೆ. ವೀರಶೈವ ಲಿಂಗಾಯತ ಸಮಾಜದ 52 ಸಂಘಟನೆಗಳು ಸೇರಿ ಈ ಎರಡು ದಿನಗಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿವಿಧ ಸಮಿತಿಗಳ ಮೂಲಕ ಯಶಸ್ವಿಯಾಗಿ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ವಿವರಿಸಿದರು.