ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಬೇಕು

KannadaprabhaNewsNetwork |  
Published : Oct 03, 2026, 02:00 AM IST
ಕ್ಯಾಪ್ಷನ1ಕೆಡಿವಿಜಿ31,32, ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. | Kannada Prabha

ಸಾರಾಂಶ

ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಗುರುವಾರ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.

- ಸಚಿವ ಬಸವಂತಪ್ಪ ಸೂಚನೆ । ಬೆಂಗಳೂರಿನಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಗುರುವಾರ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ವಿವಿಧ ಅಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯಗಳ ಪ್ರಗತಿ, ಇಲಾಖೆಯ ರಾಜಸ್ವ ವಸೂಲಾತಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿರುವ ಮುಜರಾಯಿ ದೇವಸ್ಥಾನಗಳಿಗೆ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಅವರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ದೇವಸ್ಥಾನಗಳ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ಭಕ್ತರು ಕುಳಿತುಕೊಳ್ಳಲು ಹಾಗೂ ವಿಶ್ರಾಂತಿ ಪಡೆಯಲು ಅಗತ್ಯ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳ ಸ್ಥಿತಿಗತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ವಿಶೇಷವಾಗಿ ಪುಣ್ಯಕ್ಷೇತ್ರಗಳಿಗೆ ಆಗಮಿಸುವ ಹಿರಿಯ ನಾಗರಿಕರು ಹಾಗೂ ವಯೋವೃದ್ಧ ಭಕ್ತರು ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ತೊಂದರೆಗಳಿಗೆ ಆದ್ಯತೆ ನೀಡಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. ಹಿರಿಯ ನಾಗರಿಕರು ಹಾಗೂ ವಿಶೇಷ ಅಗತ್ಯವಿರುವ ಭಕ್ತರಿಗೆ ದೇವಸ್ಥಾನಗಳಲ್ಲಿ ಸುಗಮ ದರ್ಶನಕ್ಕೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ದೇವಸ್ಥಾನಗಳ ಧಾರ್ಮಿಕ ಕಾರ್ಯಗಳ ಜತೆಗೆ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಭಕ್ತರ ಸಂಖ್ಯೆ, ಕ್ಷೇತ್ರದ ಮಹತ್ವ ಹಾಗೂ ಸ್ಥಳೀಯ ಅಗತ್ಯಗಳನ್ನು ಪರಿಗಣಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಅಗತ್ಯವಿರುವ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು. ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳು, ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಹಾಗೂ ಅಗತ್ಯವಿರುವ ಮುಂದಿನ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ದೇವಸ್ಥಾನಗಳಿಗೆ ಆಗಮಿಸುವ ಭಕ್ತರಿಗೆ ಉತ್ತಮ ಅನುಭವ ದೊರೆಯುವಂತೆ ಮೂಲಸೌಕರ್ಯಗಳನ್ನು ಸುಧಾರಿಸುವುದರ ಜತೆಗೆ, ದೇವಸ್ಥಾನಗಳ ಧಾರ್ಮಿಕ ಪರಂಪರೆ ಹಾಗೂ ಪಾವಿತ್ರ‍್ಯವನ್ನು ಕಾಪಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಚಿವ ಕೆ.ಎಸ್.ಬಸವಂತಪ್ಪ ಸೂಚಿಸಿದರು.

ಮುಜರಾಯಿ ದೇವಸ್ಥಾನಗಳ ಆದಾಯದ ಸಮರ್ಪಕ ನಿರ್ವಹಣೆ ಹಾಗೂ ರಾಜಸ್ವ ವಸೂಲಾತಿಯ ಪ್ರಗತಿಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಇಲಾಖೆಗೆ ಸಂಬಂಧಿಸಿದ ಆದಾಯ ಮೂಲಗಳನ್ನು ಸಮರ್ಪಕವಾಗಿ ನಿರ್ವಹಿಸುವುದು, ಬಾಕಿ ಇರುವ ರಾಜಸ್ವ ವಸೂಲಾತಿಗೆ ಕ್ರಮ ಕೈಗೊಳ್ಳುವುದು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು, ಭಕ್ತರಿಗೆ ತೊಂದರೆಯಾಗದಂತೆ ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

- - -

-1ಕೆಡಿವಿಜಿ31,32:

ಬೆಂಗಳೂರಿನ ವಿಕಾಸಸೌಧ ಕಚೇರಿಯಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಪ್ಪಳ ಜಿಲ್ಲೆಯ 11 ಗ್ರಾಮಗಳಿಗೆ ಗಾಂಧಿ ಪುರಸ್ಕಾರ
ಜೀವನ ಚೈತನ್ಯಕ್ಕೆ ಗಾಂಧೀಜಿ ಆದರ್ಶ ಬೇಕು