ಬುನಾದಿ ಸಾಕ್ಷರತೆ ಭವಿಷ್ಯದ ಶಿಕ್ಷಣಕ್ಕೆ ಸಹಕಾರಿ

KannadaprabhaNewsNetwork |  
Published : Dec 23, 2024, 01:04 AM IST
ಚಿತ್ರದುರ್ಗ ಪೋಟೋ ಸುದ್ದಿ222  | Kannada Prabha

ಸಾರಾಂಶ

ಚಿತ್ರದುರ್ಗ: ಮಕ್ಕಳಲ್ಲಿ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನವನ್ನು ಪರಿಣಾಮಕಾರಿಯಾಗಿ ಬೆಳೆಸುವುದರಿಂದ ಭವಿಷ್ಯದ ಶಿಕ್ಷಣಕ್ಕೆ ಸಹಕಾರಿಯಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ಚಿತ್ರದುರ್ಗ: ಮಕ್ಕಳಲ್ಲಿ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನವನ್ನು ಪರಿಣಾಮಕಾರಿಯಾಗಿ ಬೆಳೆಸುವುದರಿಂದ ಭವಿಷ್ಯದ ಶಿಕ್ಷಣಕ್ಕೆ ಸಹಕಾರಿಯಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್‌ನಲ್ಲಿ ಎಫ್‌ಎಲ್‌ಎನ್‌ನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದ ಚಿತ್ರದುರ್ಗ ತಾಲೂಕಿನ ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಓದು, ಬರಹ ಸಾಮರ್ಥ್ಯ ಬೆಳೆಸಿ ಭಾಷಾ ಕೌಶಲ್ಯಗಳಲ್ಲಿ ಸಾಮರ್ಥ್ಯ ಹೆಚ್ಚಿಸಬೇಕು. ಇದರಿಂದ ಉನ್ನತ ಶಿಕ್ಷಣ ಪಡೆಯಲು ಸುಲಭವಾಗುತ್ತದೆ ಎಂದರು. ಶಿಕ್ಷಕರಿಗೆ ಪ್ರೇರಣೆ ನೀಡಲು ಬುನಾದಿ ಸಾಕ್ಷರತೆ, ಸಂಖ್ಯಾಜ್ಞಾನದಲ್ಲಿ 100ರಷ್ಟು ಸಾಧನೆ ಮಾಡಿರುವ ಪ್ರತಿ ತಾಲೂಕಿನಿಂದ 5 ಶಾಲೆಗಳನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಗುತ್ತಿದೆ. ಪ್ರತಿ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಿಂದ ಸಾಧನೆ ಮಾಡಿರುವ ಶಾಲೆಗಳನ್ನು ಗುರುತಿಸಿ ಡಯಟ್ ವತಿಯಿಂದ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದರು. ಹಿರಿಯ ಉಪನ್ಯಾಸಕಿ ಎಚ್.ಗಿರಿಜ, ಉಪನ್ಯಾಸಕರಾದ ಯು.ಸಿದ್ದೇಶಿ, ಎಸ್.ಬಸವರಾಜು, ಬಿಆರ್‌ಸಿ ತಿಪ್ಪೇರುದ್ರಪ್ಪ, ಶ್ರೀನಿವಾಸ್, ಬಿಆರ್‌ಪಿ ಖಲಂದರ್, ಸಿಆರ್‌ಪಿ ವರಲಕ್ಷ್ಮಿ, ಹಲಗಪ್ಪನ ಹಟ್ಟಿ ಮತ್ತು ಕೆಳಗಳಹಟ್ಟಿ, ಸಿಂಗಾಪುರ ಮತ್ತು ಮಲ್ಲಾಪುರ ಪ್ರಾಥಮಿಕ ಶಾಲೆ ಶಿಕ್ಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!