ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ, ಅಮ್ಮ ಪ್ರಕಾಶನ ಕಟಪಾಡಿ, ವನಸುಮ ಟ್ರಸ್ಟ್ ಕಟಪಾಡಿ ಹಾಗೂ ವನಸುಮ ವೇದಿಕೆ ಕಟಪಾಡಿ ಆಶ್ರಯದಲ್ಲಿ ಭಾನುವಾರ ಸಂಜೆ ರಂಗಕರ್ಮಿ ಬಾಸುಮ ಕೊಡಗು ಅವರ ‘ನಡುರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನವನ್ನು ತುಳು ಕೂಟದ ಸ್ಥಾಪಕ, ಖ್ಯಾತ ವೈದ್ಯ ಡಾ. ಭಾಸ್ಕರಾನಂದ ಬಿಡುಗಡೆಗೊಳಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ, ಅಮ್ಮ ಪ್ರಕಾಶನ ಕಟಪಾಡಿ, ವನಸುಮ ಟ್ರಸ್ಟ್ ಕಟಪಾಡಿ ಹಾಗೂ ವನಸುಮ ವೇದಿಕೆ ಕಟಪಾಡಿ ಆಶ್ರಯದಲ್ಲಿ ಭಾನುವಾರ ಸಂಜೆ ರಂಗಕರ್ಮಿ ಬಾಸುಮ ಕೊಡಗು ಅವರ ‘ನಡುರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನವನ್ನು ತುಳು ಕೂಟದ ಸ್ಥಾಪಕ, ಖ್ಯಾತ ವೈದ್ಯ ಡಾ. ಭಾಸ್ಕರಾನಂದ ಬಿಡುಗಡೆಗೊಳಿಸಿದರು.
ಕನ್ನಡ ಉಪನ್ಯಾಸಕಿ ಡಾ. ನಿಕೇತನ ಕೃತಿ ಪರಿಚಯ ಮಾಡುತ್ತಾ, ಆಕರ್ಷಕ ಶೀರ್ಷಿಕೆಯ ಈ ಕೃತಿಯಲ್ಲಿ 73 ಕವನಗಳಿವೆ. ರಾತ್ರಿಯ ಭಯ, ಬೆಳಕಿನ ಧೈರ್ಯವಿದೆ. ಬೇಡಿ ಮತ್ತು ಬಿಡುಗಡೆಯ ಸಾರವಿದೆ. ಪ್ರೀತಿ, ಪ್ರೇಮ, ಕಾಮ ಸಂಗತಿಗಳೂ ಇವೆ. ಪ್ರಮುಖವಾಗಿ ಸ್ವಾತಂತ್ರ್ಯದ ಕುರಿತಾಗಿ ಹೆಣ್ಣಿನ ತುಡಿತವಿದೆ. ವರ್ತಮಾನದ ಎಲ್ಲ ವಿಷಯವನ್ನು ಒಳಗೊಂಡಿರುವ ವಿಶಿಷ್ಟ ಸಂಕಲನವಿದು ಎಂದರು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ. ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಿಶ್ವನಾಥ ಶೆಣೈ, ವನಸುಮ ಟ್ರಸ್ಟ್ನ ಕಾರ್ಯದರ್ಶಿ ವಿನಯ ಆಚಾರ್ಯ ಮುಂಡ್ಕೂರು, ಕೃತಿಕಾರ ಬಾಸುಮ ಕೊಡಗು ಉಪಸ್ಥಿತರಿದ್ದರು.ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪಲ್ಲವಿ ಕೊಡಗು ನಿರೂಪಿಸಿದರು. ಕಾವ್ಯವಾಣಿ ಕೊಡಗು ವಂದಿಸಿದರು.ಸಭಾ ಕಾರ್ಯಕ್ರಮಕ್ಕೂ ಮೊದಲು ಕಟಪಾಡಿಯ ಗಾನಪಲ್ಲವಿ ತಂಡದವರು ‘ನಡುರಾತ್ರಿಯ ಸ್ವಾತಂತ್ರ್ಯ’ ಕೃತಿಯ ಕವನಗಳನ್ನು ಸುಶ್ರಾವ್ಯವಾಗಿ ಹಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.