ಕುಷ್ಟಗಿ ಬರ ಘೋಷಣೆಗೆ ಬಯ್ಯಾಪುರ ಪಟ್ಟು:‌ ಸಿಎಂ, ಡಿಸಿಎಂಗೆ ಮನವಿ

KannadaprabhaNewsNetwork |  
Published : Sep 23, 2026, 02:30 AM IST
ಪೋಟೊ22ಕೆಎಸಟಿ3ಮಾಜಿ ಸಚಿವ ಅಮರೇಗೌಡ ಪಾಟೀಲ್‌ ಬಯ್ಯಾಪೂರ ಅವರು ಸಿಎಂಗೆ ಬರೆದ ಪತ್ರ.ಸಚಿವ ಅಮರೇಗೌಡ ಪಾಟೀಲ್‌ ಬಯ್ಯಾಪೂರ ಪೋಟೊ. | Kannada Prabha

ಸಾರಾಂಶ

ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕುಷ್ಟಗಿ:‌ ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕುಷ್ಟಗಿ ತಾಲೂಕು ಸಂಪೂರ್ಣ ಮಳೆ ಆಶ್ರಿತ ಪ್ರದೇಶವಾಗಿದ್ದು, ಸಮರ್ಪಕ ನೀರಾವರಿ ಸೌಲಭ್ಯಗಳಿಲ್ಲ. ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ವಿವಿಧ ಬೆಳೆಗಳು ಹಾನಿಗೀಡಾಗಿವೆ. ಹೀಗಾಗಿ ಕೇವಲ ಮಳೆ ಮಾಪನ ಕೇಂದ್ರಗಳಲ್ಲಿನ ದಾಖಲೆಗಳನ್ನು ಆಧರಿಸದೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿನ ವಾಸ್ತವ ಮಳೆ ಕೊರತೆ, ಬೆಳೆ ಹಾನಿ ಹಾಗೂ ರೈತರ ಪರಿಸ್ಥಿತಿಯನ್ನು ಆಧರಿಸಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಬಯ್ಯಾಪುರ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕುಷ್ಟಗಿ ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗದಿರುವುದರಿಂದ ಇಲ್ಲಿನ ರೈತರಿಗೆ ಅನ್ಯಾಯವಾಗಿದೆ. ಗ್ರಾಮವಾರು ಮಳೆ ಕೊರತೆ ಮತ್ತು ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸರ್ಕಾರದ ಪರಿಹಾರ ಹಾಗೂ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕುಷ್ಟಗಿ ತಾಲೂಕಿನಲ್ಲಿ ಬರ ಪರಿಸ್ಥಿತಿ ವೀಕ್ಷಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೂ ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತೊಮ್ಮೆ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಬೀದಿಪಾಲು ಮಾಡುವ ಆದೇಶ ಕೈಬಿಡಲು ಒತ್ತಾಯ
ಬಡವರ ಒಕ್ಕಲೆಬ್ಬಿಸಲು ಹುನ್ನಾರ: ತಿಮ್ಮಪ್ಪ ಎಂ.ಕೆ.