ಬಿಬಿಎಂಪಿ ಶಾಲಾ-ಕಾಲೇಜು ಅಭಿವೃದ್ಧಿಗೆ ಸಂಘ, ಕಂಪನಿಗಳಿಂದ ಅರ್ಜಿ ಆಹ್ವಾನ

KannadaprabhaNewsNetwork |  
Published : Jun 16, 2024, 01:50 AM IST
ಬಿಬಿಎಂಪಿ | Kannada Prabha

ಸಾರಾಂಶ

ಶಾಲೆ - ಕಾಲೇಜುಗಳ ಅಭಿವೃದ್ಧಿಗೆ ಆಸಕ್ತಿ ಇರುವ ಸಂಘಗಳು, ಕಂಪನಿಗಳಿಂದ ಬಿಬಿಎಂಪಿ ಅರ್ಜಿ ಆಹ್ವಾನಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಬಿಎಂಪಿ ಶಾಲಾ, ಕಾಲೇಜುಗಳನ್ನು ಶೈಕ್ಷಣಿಕವಾಗಿ ಉತ್ತಮಗೊಳಿಸುವ ಹಾಗೂ ಇತರೆ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಕೋರಿದೆ.

ಶಿಶುವಿಹಾರ-93, ಪ್ರಾಥಮಿಕ-16, ಪ್ರೌಢಶಾಲೆ-33 ಪದವಿ ಪೂರ್ವ ಕಾಲೇಜು-18, ಪ್ರಥಮ ದರ್ಜೆ ಕಾಲೇಜು-4 ಹಾಗೂ ಸ್ನಾತಕೋತ್ತರ ಕೇಂದ್ರ-2 ಶೈಕ್ಷಣಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಬಡ ಹಾಗೂ ಎಲ್ಲಾ ವರ್ಗದ ಮಕ್ಕಳು ಉಚಿತ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ಉಚಿತ ಸಮವಸ್ತ್ರ, ನೋಟ್ ಪುಸ್ತಕ, ಪಠ್ಯ ಪುಸ್ತಕ, ಬ್ಯಾಗ್, ಶೂ ಮತ್ತು ಕಾಲು ಚೀಲ, ಬಿಸಿಯೂಟ ಹಾಗೂ ಇತರೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಾಲಿಕೆಯ ವತಿಯಿಂದ ಉಚಿತವಾಗಿ ಒದಗಿಸಲಾಗುತ್ತಿದೆ.

ಪಾಲಿಕೆಯ ಶಾಲಾ-ಕಾಲೇಜುಗಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ಸಂಬಂಧ ಹಲವಾರು ಸಂಘ-ಸಂಸ್ಥೆಗಳು ಸಿಎಸ್‌ಆರ್ ಅಡಿಯಲ್ಲಿ ಅನುದಾನವನ್ನು ಒದಗಿಸಲು ಮುಂದೆ ಬರುತ್ತಿದ್ದು, ಮೂಲಸೌಕರ್ಯಗಳನ್ನು ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಹಾಗೂ ಸಾರ್ವಜನಿಕರಿಂದ 3 ಮಾದರಿಯಲ್ಲಿ ಅನುದಾನವನ್ನು ಒದಗಿಸಲು ಹಾಗೂ ಪಾಲಿಕೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಾಮಾಜಿಕ ಸೇವೆಯನ್ನು ಒದಗಿಸಲು ಮುಖ್ಯ ಆಯುಕ್ತರು ಸೂತ್ತೋಲೆಯನ್ನು ಹೊರಡಿಸಿದ್ದಾರೆ.

ಈ ಸುತ್ತೋಲೆಯಂತೆ ಪಾಲಿಕೆಯ ಶಾಲಾ, ಕಾಲೇಜುಗಳನ್ನು ಶೈಕ್ಷಣಿಕವಾಗಿ ಉತ್ತಮಗೊಳಿಸುವ ಹಾಗೂ ಇತರೆ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಹಾಗೂ ಸಾರ್ವಜನಿಕರು ಹಿರಿಯ ಸಹಾಯಕ ನಿರ್ದೇಶಕರು(ಶಿಕ್ಷಣ) ಅನೆಕ್ಸ್-3, 1ನೇ ಮಹಡಿ, ಬಿಬಿಎಂಪಿ ಕೇಂದ್ರ ಕಚೇರಿ- 94801 80152, ಇ-ಮೇಲ್ eoeducation@yahoo.in ಅಥವಾ specialcommissionereducation@gmail.com ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಣೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಗಲಕೋಟೆ: ಮತ್ತೆ ಚರಂತಿಮಠ, ಮೇಟಿ ಕುಟುಂಬ ಮಧ್ಯೆ ಫೈಟ್‌
ಗರ್ಭಿಣಿ ಜೊತೆ ಪುತ್ರನ ಅನೈತಿಕ ಸಂಬಂಧ- ಸಾಮಾಜಿಕ ಬಹಿಷ್ಕಾರಕ್ಕೆ ನೊಂದ ಮಹಿಳೆ ಆತ್ಮ*ತ್ಯೆ