ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ವಿದೇಶಗಳಲ್ಲಿ ಈ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಪರಿಶೀಲಿಸಲಾಗಿದೆ. ಈಗಾಗಲೇ ಕಸ ಸುಡುವ ಮೂಲಕ ಪರಿಸರ ಮಾಲಿನ್ಯ ಆಗದಂತೆ ಕಸ ವಿಲೇವಾರಿ ತಂತ್ರಜ್ಞಾನಗಳನ್ನು ಕೆಲ ನಗರಗಳಲ್ಲಿ ಪಾಲನೆ ಮಾಡಲಾಗುತ್ತಿದ್ದು, ಅದೇ ಮಾದರಿಯನ್ನು ಅನುಷ್ಠಾನಕ್ಕೆ ತರುವ ಚಿಂತನೆ ಇದೆ ಎಂದರು.
ಕಸ ವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಶೀಘ್ರ ಈ ಭಾಗಕ್ಕೆ ಮತ್ತೊಮ್ಮೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಗುವುದು. ವಸ್ತುಸ್ಥಿತಿ ಅರಿತು, ಸ್ಥಳೀಯರ ಆದ್ಯತೆಗಳನ್ನೂ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಶಾಸಕ ಧೀರಜ್ ಮುನಿರಾಜು ಮಾತನಾಡಿ, ಜಲಾಶಯ ನಿರ್ಮಾಣದಿಂದ ಗ್ರಾಮಗಳು ಮುಳುಗಡೆ ಆಗದಂತೆ ಸಹಕರಿಸಿ, ಬಾಧಿತರಾಗುವ ರೈತರ ನೆರವಿಗೆ ಸರ್ಕಾರ ನಿಲ್ಲಬೇಕು. ದೊಡ್ಡಬಳ್ಳಾಪುರ ತಾಲೂಕಿಗೆ ಬಿಬಿಎಂಪಿ ಕಸದ ಸಮಸ್ಯೆಯಿಂದ ಮುಕ್ತಿ ದೊರಕಿಸಿ ಕೊಡಬೇಕು ಎಂದು ಮನವಿ ಮಾಡಿದರು.