ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಬ್ರಹ್ಮಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ

KannadaprabhaNewsNetwork |  
Published : Mar 02, 2025, 01:16 AM IST
ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ  ಆಮಂತ್ರಣ ಪತ್ರಿಕೆ ಬಿಡುಗಡೆ, ಬಾಲಾಯ ಪ್ರತಿಷ್ಠೆ | Kannada Prabha

ಸಾರಾಂಶ

ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಏ.೪ರಿಂದ ಏ.೯ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಶನಿವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಏ.೪ರಿಂದ ಏ.೯ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಶನಿವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.

ತುಳುನಾಡಿನಲ್ಲಿ ಜನರ ಜೀವನದಲ್ಲಿ ಬ್ರಹ್ಮಕಲಾಶಾದಿ ಕಾರ್ಯಕ್ರಮಗಳು ಆಧ್ಯಾತ್ಮಿಕವಾಗಿ, ಭೌತಿಕವಾಗಿ, ದೈವಿಕವಾಗಿ ಹಾಸು ಹೊಕ್ಕಿದೆ. ದೇವಸ್ಥಾನಗಳಿಂದ ಕಲೆ, ಸಂಸ್ಕೃತಿಗಳಿಗೆ ಉತ್ತೇಜನ ದೊರಕುತ್ತದೆ. ಭಾರತೀಯ ಸನಾತನ ಸಂಸ್ಕೃತಿಯನ್ನು ಅರಿತು ಬಾಳ ಬೇಕು ಎಂದರು.

ತನ್ನ ಮೇಲೆ ಮತ್ತು ದೇವರ ಮೇಲೆ ನಂಬಿಕೆ ಇರಿಸಿದಾಗ ಯಾವುದೇ ಸಾಧನೆ ಮಾಡಲು ಸಾಧ್ಯ.ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ನಿರಂತರ ಚಿಂತನೆಯುಳ್ಳ, ಕ್ರಿಯಾಶೀಲವಾದ ಸನಾತನವಾದ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ದೇವಸ್ಥಾನಗಳ ಅಭಿವೃದ್ಧಿಗಾಗಿ ಕೈ ಜೋಡಿಸಬೇಕು. ದೇವರ ಅನುಗ್ರಹದಿಂದ ಬ್ರಹ್ಮಕಲಶೋತ್ಸವ ಯಶಸ್ವಿಯಾಗಲಿ ಎಂದು ನುಡಿದರು.

ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ರಹ್ಮಕಲಶೋತ್ಸವಕ್ಕೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಎಲ್ಲರೂ ಕೈ ಜೋಡಿಸಬೇಕು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಹೇಳಿದರು.

ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ , ಸಮಿತಿ ಸಹ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಅವರು ಶುಭ ಹಾರೈಸಿದರು.

ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ, ಬ್ರಹ್ಮ ಕಲಶೋತ್ಸವ ಸಮಿತಿ ಕೋಶಾಧಿಕಾರಿ ನಾರಾಯಣ ಹೆಗ್ಡೆ ವೇದಿಕೆಯಲ್ಲಿದ್ದರು. ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಸೇವಾ ಸಮಿತಿ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಸಮಿತಿ ಕಾರ್ಯಾಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಸ್ವಾಗತಿಸಿದರು. ಬ್ರಹ್ಮ ಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಐತಪ್ಪ ಪೂಜಾರಿ ವಂದಿಸಿದರು. ಮೋಹನದಾಸ ಕೊಟ್ಟಾರಿ ಹಾಗೂ ಸತೀಶ್ ಶೆಟ್ಟಿ ಮೊಡಂಕಾಪು ನಿರೂಪಿಸಿದರು.

ಬಳಿಕ ತಂತ್ರಿಯವರ ಹಾಗೂ ಕ್ಷೇತ್ರದ ಪ್ರ.ಅರ್ಚಕ ರಘುಪತಿ ಭಟ್ ಪೌರೋಹಿತ್ಯದಲ್ಲಿ ಬಾಲಾಲಾಯ ಪ್ರತಿಷ್ಠೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ