ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಂದುವರೆದಿದ್ದು, 250ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿವೆ.ರಾಜ್ಯ ಸರ್ಕಾರದ ಅಧೀನದ ಉದ್ದಿಮೆಯಾಗಿರುವ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿಯಲ್ಲಿ ಸಹಾಯಕ ಫೋರ್ಮೆನ್, ಫಿಟ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ, ಐಟಿಐ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು. ಕಲ್ಯಾಣ ಕರ್ನಾಟಕ ವೃಂದ ಮತ್ತು ಉಳಿಕ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ. ಮಾ.19ರಿಂದ ಮೇ 5ರ ವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಭೇಟಿ ನೀಡಿ: huttigold.karnataka.gov.in--
ಆರೋಗ್ಯ ವಿವಿಯಲ್ಲಿ ನೇಮಕಾತಿರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಸೇರಿ 44 ಹುದ್ದೆಗಳ ನೇಮಕಾತಿಗೆ ಕೆಇಎ ಅಧಿಸೂಚನೆ ಹೊರಡಿಸಿದೆ. ಮಾ.26ರಿಂದ ಏ.25ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಎಂಜಿನಿಯರಿಂಗ್ ಪದವೀಧರರು, ಯಾವುದೇ ಪದವೀಧರರು ಮತ್ತು ಪಿಯುಸಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.
--ಬಿಡಿಎ, ಜಿಟಿಟಿಸಿಯಲ್ಲಿ ನೇಮಕಾತಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ 25 ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳು ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಖಾಲಿ ಇರುವ ವಿವಿಧ ವೃಂದಗಳ 76 ಹುದ್ದೆಗಳ ನೇಮಕಾತಿಗೆ ಕೆಇಎ ಅಧಿಸೂಚನೆ ಹೊರಡಿಸಿದೆ. ಮಾ.24ರಿಂದ ಏ.23ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ ಮತ್ತು ಶೈಕ್ಷಣಿಕ ಅರ್ಹತೆಯನ್ನು ಒಳಗೊಂಡ ವಿವರವಾದ ಅಧಿಸೂಚನೆಯನ್ನು ಮಾ.24ರಂದು ಪ್ರಕಟಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.