ಮುಂಬರುವ ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣೆಯು ನಡೆಯಲಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ

ಚುನಾವಣೆಗೆ ಇನ್ನು ಮೂರು ತಿಂಗಳ ಬಾಕಿ ಇರುವಾಗಲೇ ಈಗಿಂದಲೇ ಚುನಾವಣೆಯ ಅಖಾಡವು ಸಿದ್ಧಗೊಂಡಿದೆ. ಈಗಾಗಲೇ ಮೊದಲ ಹಂತದಲ್ಲಿ ಪ್ರಚಾರ ಕಾರ್ಯವನ್ನು ಕೈಗೊಂಡಿದ್ದು, ಬಾಕಿ ಉಳಿದಿರುವ ರಾಯಬಾಗ, ನಿಪ್ಪಾಣಿ, ಬೈಲಹೊಂಗಲ ಮತ್ತು ಚೆನ್ನಮ್ಮನ ಕಿತ್ತೂರು ತಾಲೂಕುಗಳಲ್ಲಿ ಆಗಸ್ಟ್ ತಿಂಗಳಲ್ಲಿ ಪ್ರಚಾರ ಕಾರ್ಯವು ನಡೆಯಲಿದೆ.ಜತೆಗೆ ಹುಕ್ಕೇರಿ ಮತ್ತು ಕಾಗವಾಡ ತಾಲೂಕುಗಳಲ್ಲಿ ಚುನಾವಣೆಯನ್ನು ನಡೆಸಲು ಸಭೆಯು ತೀರ್ಮಾನಿಸಿದೆ.
ಜಿದ್ದಾಜಿದ್ದಿನಿಂದ ಕೂಡಿರುವ ಈ ಬಿಡಿಸಿಸಿ ಬ್ಯಾಂಕಿನ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ನಮ್ಮ ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಈಗಾಗಲೇ ರಣತಂತ್ರಗಳನ್ನು ಹೆಣೆಯಲಾಗಿದ್ದು, ಮತ್ತೊಂದು ಅವಧಿಗೆ ನಮ್ಮ ಬಣವು ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ವಿರೋಧಿಗಳು ಯಾರೇ ಆಗಿದ್ದರೂ ಅವರನ್ನು ಸಮರ್ಥವಾಗಿ ಎದುರಿಸಲು ನಮ್ಮ ಬಣ ಸಿದ್ಧಗೊಂಡಿದೆ. ಅಧಿಕಾರವನ್ನು ಹಿಡಿದು ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ. ಈ ಚುನಾವಣೆಯು ಪಕ್ಷಾತೀತವಾಗಿದ್ದು, ಎಲ್ಲ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಅಣಿಯಾಗುತ್ತಿದ್ದೇವೆ ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ್ ಕುಲಗೋಡೆ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ, ಅಪ್ಪಾಸಾಹೇಬ್ ಜೊಲ್ಲೆ, ವಿಕ್ರಮ ಇನಾಂದಾರ, ಶಂಕರಗೌಡ ಪಾಟೀಲ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.