ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಆಯ್ಕೆ ಸಭೆಯ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಸುಭಾಷ ಢವಳೇಶ್ವರ ಅವರೇ ಮುಂದುವರಿಯಲಿದ್ದು, ಬ್ಯಾಂಕಿನ ಎಲ್ಲ ನಿರ್ದೇಶಕರು, ಸದಸ್ಯರು, ಶಾಸಕರ ಒಮ್ಮತದ ನಿರ್ಣಯ ಪಡೆದು ನೇಮಕ ಮಾಡಲಾಗಿದೆ ಎಂದು ಹೇಳಿದರು.
ಮೂವರು ಸಹೋದರರು ಒಂದೇ ವೇದಿಕೆಯಲ್ಲಿ ಭಾಗವಹಿಸಿದ್ದರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಸಹೋದರರು ಬೇರೆ ಬೇರೆ ಪಕ್ಷದಲ್ಲಿದ್ದರೂ ಆಯಾ ಪಕ್ಷದ ಅಭ್ಯರ್ಥಿಗಳು ಇರುವುದರಿಂದ ಇಲ್ಲಿಗೆ ಬಂದಿದ್ದೇವಷ್ಟೆ. ಇದರಲ್ಲಿ ವಿಶೇಷತೆಯೇನೂ ಇಲ್ಲ. ಒಂದೊಂದು ಪಾರ್ಟಿಯಲ್ಲಿ ಒಬ್ಬೊಬ್ಬರು ಇರುವುದರಿಂದ ನಾವಿಲ್ಲಿ ಕೂಡಿದ್ದೇವಷ್ಟೆ ಎಂದು ಮುಗುಳ್ನಗೆ ಬೀರಿದರು.ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು:
ಎಸ್‌ಡಿಎ ಆತ್ಮಹತ್ಯೆ ಪ್ರಕರಣ ರೀಪೋರ್ಟ್ ಬರಲಿ:ಕಳೆದ ಕೆಲ ದಿನಗಳ ಹಿಂದೆ ಬೆಳಗಾವಿ ತಹಸೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೂ ಹೇಳಲು ಸಾಧ್ಯವಿಲ್ಲ. ಆತ್ಮಹತ್ಯೆ ಪ್ರಕರಣದ ರಿಪೋರ್ಟ್ ಬಂದ ನಂತರವೇ ಏನು ಕ್ರಮ ಕೈಗೊಳ್ಳಬೇಕೆಂಬ ನಿರ್ಧಾರ ಮಾಡಬೇಕಾಗುತ್ತದೆ. ಪ್ರಕರಣ ಈಗಾಗಲೇ ತನಿಖಾ ಹಂತದಲ್ಲಿರುವುದರಿಂದ ಈಗಲೇ ಏನೂ ಹೇಳಲು ಆಗುವುದಿಲ್ಲ ಎಂದ ಅವರು, ಬೆಳಗಾವಿಯಲ್ಲಿ ಕೆಳಹಂತದ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವ ವಿಚಾರದ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.