ಧಾರವಾಡ:
ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ-೨೦೨೫ ಮತ್ತು ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಯೋಜನೆ-೨೦೨೧ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಮಿತಿ ಕಾರ್ಯಕ್ರಮ ಜರುಗಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹತ್ತು ಮಕ್ಕಳಿಗೆ ಒಬ್ಬ ಶಿಕ್ಷಕರಿರುವ ಕುರಿತು ಸಂಪೂರ್ಣ ಮಾಹಿತಿ ಸಲ್ಲಿಸಬೇಕು. ಆರೋಗ್ಯ ಇಲಾಖೆಯಲ್ಲಿ ತಾಯಂದಿರು ಹಾಗೂ ಮಕ್ಕಳ ಸಾವಿನ ಪ್ರಕರಣಗಳ ಸಂಖ್ಯೆ ಮತ್ತು ಸಂಬಂಧಿತ ಮಾಹಿತಿ ಮರುಪರಿಶೀಲಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಜಿಲ್ಲೆಯ ಮಾನವ ಅಭಿವೃದ್ಧಿ ಸೂಚ್ಯಂಕ ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ ಸೂಚ್ಯಂಕ ಸರ್ಕಾರದ ಪ್ರಮುಖ ಮಾನದಂಡವಾಗಿದ್ದು, ಹಿಂದುಳಿದ ತಾಲೂಕಿನ ದತ್ತಾಂಶ ಸಂಗ್ರಹ ನಿಖರವಾಗಿರಬೇಕು ಎಂದರು.ಜಿಲ್ಲೆಯ ಪ್ರತಿ ತಾಲೂಕಿನ ಪರಿಸ್ಥಿತಿ ವಿಭಿನ್ನವಾಗಿದ್ದು, ಶಿಕ್ಷಣ, ಆರೋಗ್ಯ, ಪೌಷ್ಟಿಕತೆ ಹಾಗೂ ಮುಲಭೂತ ಸೌಕರ್ಯ ಕೊರತೆ ಇರಬಹುದು. ಅಂತಹ ದತ್ತಾಂಶ ಪರಿಶೀಲಿಸಿ, ನಿಖರ ಮಾಹಿತಿ ನೀಡಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಆರೋಗ್ಯ ಇಲಾಖೆಯವರು ಪೌಷ್ಟಿಕ ಆಹಾರ ಮತ್ತು ಆರೋಗ್ಯ ಸೇವೆ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಮನ್ವಯತೆಯಿಂದ ದತ್ತಾಂಶ ಕ್ರೋಡೀಕರಿಸಿ ಸಲ್ಲಿಸಬೇಕು. ಉನ್ನತ ಮಾಧ್ಯಮಿಕ ಶಿಕ್ಷಣಕ್ಕಾಗಿ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಸಂಪೂರ್ಣ ವಿವರವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಡಿಸಿಪಿ ಶ್ರುತಿ, ಜಿಲ್ಲಾ ನೋಡಲ್ ಅಧಿಕಾರಿ ಆರ್.ವಿ. ದಾಡಿಬಾಯಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.