ಮದ್ಯ ಮುಕ್ತರಾಗಿ ಉತ್ತಮ ಬದುಕು ರೂಪಿಸಿಕೊಳ್ಳಿ

KannadaprabhaNewsNetwork |  
Published : Jun 19, 2024, 01:10 AM IST
ಕೆ ಕೆ ಪಿ ಸುದ್ದಿ 01:ನಗರದಲ್ಲಿ ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಮಧ್ಯವರ್ಜನ ಶಿಬಿರ  ವನ್ನು ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ಕನಕಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೇ ರಾಜ್ಯಾದ್ಯಂತ ಹಲವು ಮಧ್ಯವರ್ಜನ ಶಿಬಿರಗಳನ್ನು ಆಯೋಜಿಸಿ ಮದ್ಯವಸಗಿಗಳನ್ನು ಮದ್ಯಚಟದಿಂದ ಪಾರು ಮಾಡಿ ಅವರ ಕುಟುಂಬಗಳೊಂದಿಗೆ ಉತ್ತಮ ಬದುಕು ರೂಪಿಸಿಕೊಟ್ಟಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹರೀಶ್‌ಕುಮಾರ್ ಹೇಳಿದರು.

ಕನಕಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೇ ರಾಜ್ಯಾದ್ಯಂತ ಹಲವು ಮಧ್ಯವರ್ಜನ ಶಿಬಿರಗಳನ್ನು ಆಯೋಜಿಸಿ ಮದ್ಯವಸಗಿಗಳನ್ನು ಮದ್ಯಚಟದಿಂದ ಪಾರು ಮಾಡಿ ಅವರ ಕುಟುಂಬಗಳೊಂದಿಗೆ ಉತ್ತಮ ಬದುಕು ರೂಪಿಸಿಕೊಟ್ಟಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹರೀಶ್‌ಕುಮಾರ್ ಹೇಳಿದರು.

ತಾಲೂಕು ಮದ್ಯ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ 1947ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೋ ಗಳಿಗೆಗಳಲ್ಲಿ ದುಶ್ಚಟಗಳಿಗೆ ದಾಸರಾಗಿರುವವರಿಗೆ ಒಂದು ಶಿಬಿರವೇರ್ಪಡಿಸಿ, ಅವರನ್ನು ಆ ವ್ಯಸನದಿಂದ ಬಿಡುಗಡೆ ಮಾಡಿ ಕುಟುಂಬದೊಂದಿಗೆ ಬದುಕು ಕಟ್ಟಿಕೊಳ್ಳುವ ಹಂತಕ್ಕೆ ತರುವುದೆಂದರೆ ಸಮ್ಮನೆಯಲ್ಲ. ಆದರೆ ಧರ್ಮಸ್ಥಳ ಸಂಸ್ಥೆ ಸಮಾಜದ ಒಳಿತಿಗಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಇಡೀ ಸಮಾಜವೇ ಅವರಿಗೆ ಚಿರಋುಣಿಗಳಾಗಿದ್ದೇವೆ ಎಂದರು.

ಜಿಲ್ಲಾ ನಿರ್ದೇಶಕ ಜಯಕರಶೆಟ್ಟಿ ಮಾತನಾಡಿ, ಮದ್ಯ ವ್ಯಸನಿಗಳು ಕುಡಿದು ಕುಡಿದು ಕುಟುಂಬವನ್ನೇ ಮರೆತಿರುವವರನ್ನೂ ಪಾನಮುಕ್ತರನ್ನಾಗಿಸಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳನ್ನಾಗಿ ಮಾಡಿದ್ದಾರೆಂದು ಹೇಳಿದರು.

ಡಾ.ಶಶಿಧರ್ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಿದ್ದು ಅವರ ಆರೋಗ್ಯದ ಮೇಲೂ ಪರಿಣಾಮ ಬೀರಿ ದೇಹದ ಅಂಗಾಂಗಗಳು ಹಾಳಾಗಿ ದೀರ್ಘಕಾಲಿಕ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ, ಇಂತಹ ಚಟಗಳಿಂದ ಹೇಗೆ ದೂರವಿರಬೇಕೆಂದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಮಯ್ಯ, ಯೋಜನಾಧಿಕಾರಿ ಸಂತೋಷ್, ವೆಂಕಟಪ್ಪ, ಜನಜಾಗೃತಿ ವೇದಿಕೆ ಸದಸ್ಯರು, ಶಿಬಿರಾಧಿಕಾರಿ ನಂದಕುಮಾರ್, ಆರೋಗ್ಯ ಸಹಾಯಕಿ ರಂಜಿತ, ಎಲ್ಲಾ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.ಕೆ ಕೆ ಪಿ ಸುದ್ದಿ 01:ಕನಕಪುರದಲ್ಲಿ ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರಕ್ಕೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹರೀಶ್‌ಕುಮಾರ್ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ