ಡೆಂಘೀ ಜ್ವರ, ಸೊಳ್ಳೆಗಳ ಉತ್ಪತ್ತಿ ತಾಣಗಳ ಬಗ್ಗೆ ಜಾಗೃತಿ ವಹಿಸಿ: ಎಸ್.ಡಿ.ಬೆನ್ನೂರ್

KannadaprabhaNewsNetwork |  
Published : Jun 03, 2025, 12:00 AM IST
2ಕೆಎಂಎನ್ ಡಿ24 | Kannada Prabha

ಸಾರಾಂಶ

ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಡೆಂಘೀ ಜ್ವರ ಹರಡುವ ಸಾಧ್ಯತೆ ಇದೆ. ಸೊಳ್ಳೆ ಉತ್ಪತ್ತಿ ತಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈಡೀಸ್ ಸೊಳ್ಳೆ ಉತ್ಪತ್ತಿ ಹಾಗೂ ನಿಯಂತ್ರಣ ಕುರಿತು ಶಾಲಾ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಜಾಗೃತಿ ಅಗತ್ಯ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಡೆಂಘೀ ಜ್ವರ, ಸೊಳ್ಳೆಗಳ ಉತ್ಪತ್ತಿ ತಾಣಗಳ ಬಗ್ಗೆ ಜಾಗೃತಿ ಇರಲಿ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ್ ಹೇಳಿದರು.

ತಾಲೂಕಿನ ಮೇಳಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಮಹದೇವಪುರ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ಡೆಂಘೀ ಜ್ವರ ಹಾಗೂ ಈಡೀಸ್ ಸೊಳ್ಳೆ ಉತ್ಪತ್ತಿ ಹಾಗೂ ನಿಯಂತ್ರಣ ಕುರಿತು ಶಾಲಾ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಡೆಂಘೀ ಜ್ವರ ಹರಡುವ ಸಾಧ್ಯತೆ ಇದೆ. ಸೊಳ್ಳೆ ಉತ್ಪತ್ತಿ ತಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಪ್ರಾತ್ಯಕ್ಷಿತೆಯೊಂದಿಗೆ ಅರಿವು ಮೂಡಿಸಿದರು.

ನಂತರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ, ಕೋವಿಡ್ ಮುಂಜಾಗ್ರತೆ ಕುರಿತು ಮಾತನಾಡಿದರು. ಈ ವೇಳೆ ಮುಖ್ಯ ಶಿಕ್ಷಕ ಗೌಸ್ ಶರೀಫ್, ಸಹ ಶಿಕ್ಷಕರಾದ ಸುನಿತಾ, ಪೂಜಾ, ಉಷಾ, ದೀಪ ಹಾಗೂ ಮುಖಂಡರಾದ ನಾಗರಾಜು, ಮಧು, ಸಮುದಾಯ ಆರೋಗ್ಯ ಅಧಿಕಾರಿ ಮೌಲ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ತಸ್ಮೀಯ ಬಾನು, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್ ಕೃಷ್ಣೇಗೌಡ, ಅಂಗನವಾಡಿ ಕಾರ್ಯಕರ್ತೆ ದುಂಡಮ್ಮ, ಆಶಾ ಕಾರ್ಯಕರ್ತೆ ಮಹಾಲಕ್ಷ್ಮಿ, ಭಾಗ್ಯಲಕ್ಷ್ಮಿ, ಅಡುಗೆ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಇದ್ದರು.

ಬೆಳೆಗಳಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಮದ್ದೂರು: ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸುವ ವಿವಿಧ ಕಾರ್ಯಕ್ರಮಗಳಡಿ ಬೆಳೆಗಳಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ತಾಳೆ ಬೆಳೆ ಯೋಜನೆಯಡಿ ನೀರಾವರಿ ವ್ಯವಸ್ಥೆ ಹೊಂದಿರುವ ಜಮೀನುಗಳಲ್ಲಿ ತಾಳೆ ಬೆಳೆ ಬೆಳೆಯಲು ಇಚ್ಚಿಸುವ ರೈತರಿಗೆ ಸಹಾಯಧನ ನೀಡಲಾಗುವುದು. ಸರ್ಕಾರ ಅನುಮೋದಿತ ಖಾಸಗಿ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಕಾಫಿ, ಟೀ, ರಬ್ಬರ್ ಮತ್ತು ಅಡಿಕೆ ಬೆಳೆ ಹೊರತು ಪಡಿಸಿ ಉಳಿದ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ನೀಡಲಾಗುವುದು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾಂಶ ಬಾಳೆ, ಕಂದು ಬಾಳೆ, ಹೈಬ್ರಿಡ್ ತರಕಾರಿ, ಬೆಣ್ಣೆಹಣ್ಣು, ಡ್ರ್ಯಾಗನ್ ಫ್ರೂಟ್ ಬೆಳೆಯುವ ರೈತರಿಗೆ ಸಹಾಯಧನ, ನೆಲಹೊದಿಕೆಗೆ ಸಹಾಯಧನ, ಸಮಗ್ರ ಪೋಷಕಾಂಶ/ಸಮಗ್ರ ಪೀಡೆ ನಿರ್ವಹಣೆ ಕಾರ್ಯಕ್ರಮದಡಿ ಪರಿಕರ ವಿತರಣೆ, ಪಾಲಿಹೌಸ್ ಕೃಷಿಹೊಂಡ, ಈರುಳ್ಳಿ ಶೇಖರಣಾ ಘಟಕ, ಯಾಂತ್ರಿಕರಣ ಘಟಕಗಳಿಗೆ ತಾಲೂಕಿಗೆ ನಿಗಧಿಪಡಿಸುವ ಗುರಿಗಳನ್ವಯ, ಷರತ್ತಿಗೊಳಪಟ್ಟಂತೆ ಸಹಾಯಧನ ನೀಡಲಾಗುವುದು.

ಮಧುವನ ಮತ್ತು ಜೇನುಸಾಕಣಿಕೆ ಅಭಿವೃದ್ದಿ ಯೋಜನೆಯಡಿ ಜೇನು ಪೆಟ್ಟಿಗೆ, ಜೇನು ಕುಟುಂಬ ಹಾಗೂ ಸ್ಟ್ಯಾಂಡ್‌ಗಳನ್ನು ಖರೀದಿಸಿದ ಇತರೆ ರೈತರಿಗೆ ಪ್ರತಿ ಪ್ಯಾಕೇಜ್‌ಗೆ ಹಾಗೂ ಪ.ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಸಹಾಯಧನ ನೀಡಲಾಗುವುದು.

ಆಸಕ್ತ ರೈತರು ಜೂ.6 ರೊಳಗೆ ಅರ್ಜಿ ಸಲ್ಲಿಸಲು ಬಿ.ಕೆ.ಸಂಪತ್‌ಕುಮಾರ್ ಕಸಬಾ ಮೊ-9986773974, ಎಸ್.ಶಿವಪ್ರಸಾದ್ ಸಿ.ಎ.ಕೆರೆ ಹೋಬಳಿ ಮೊ-8867301929, ಕೆ.ಎಂ.ನಿತಿನ್ ಆತಗೂರು ಹಾಗೂ ಕೊಪ್ಪ ಹೋಬಳಿ ಮೊ-8217392184 ಸಂಪರ್ಕಿಸಲು ಕೋರಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!