ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಪೊಲೀಸ್ ಭವನ ಮೈತ್ರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿವೃತ್ತರಾದವರೇ ಡಿಜಿಟಲ್ ಅರೆಸ್ಟ್‌ನ ಗುರಿ. ಹಾಗಾಗಿ ಎಲ್ಲರೂ ಜಾಗರೂಕವಾಗಿರಿ. ನಿಮ್ಮಲ್ಲಿನ ದೌರ್ಬಲ್ಯಗಳನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದ ಮೂಲಕ ವಂಚಿಸುವ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಬಹುತೇಕರು ಶಿಕ್ಷಣ ಪಡೆದವರೇ ಆಗಿದ್ದಾರೆ. ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣಗಳ ಮೂಲಕ ಬರುವ ಅನಾಮಾಧೇಯ ಲಿಂಕ್ ಗಳನ್ನು ಕ್ಲಿಕ್ ಮಾಡುವ ಪ್ರಯತ್ನ ಮಾಡಬೇಡಿ ಎಂದು ಸಲಹೆ ನೀಡಿದರು.ಹಣ ದ್ವಿಗುಣಗೊಳಿಸುವ ಅಥವಾ ಅತಿ ಹೆಚ್ಚು ಲಾಭ ಬರುವಂತೆ ಮಾಡುವ ಸ್ಕೀಂಗಳ ಕುರಿತು ಜೋಪಾನವಾಗಿರಿ, ಕಷ್ಟಪಟ್ಟು ದುಡಿದು ಸಂಗ್ರಹಿಸಿದ ಹಣ ಕಳೆದುಕೊಳ್ಳಬೇಡಿ. ಪಾದಚಾರಿಗಳು ರಸ್ತೆಯ ಮೇಲೆ ನಡೆಯದೇ ಪಾದಚಾರಿ ಮಾರ್ಗದಲ್ಲೆ ಹೆಜ್ಜೆ ಹಾಕಿರಿ. ಬೀದಿ ದೀಪಗಳ ಕೊರತೆ ಇರುವುದರಿಂದ ವಾಹನ ಬೆಳಕು ಬೀಳುವವರೆಗೂ ರಸ್ತೆಯಲ್ಲಿ ನಡೆದು ಹೋಗುತ್ತಿರುವವರು ಕಾಣುವುದಿಲ್ಲ. ಮನೆ, ಕಚೇರಿ, ಅಂಗಡಿಗಳ ಬಳಿ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಬೇಕೆಂದರು.
ಸಭೆಯಲ್ಲಿ ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ‍್ಪ ವಾಹನ ನಿಲುಗಡೆ ಸಮಸ್ಯೆ, ಮಾದಕವಸ್ತು ಸೇವನೆಯಂತಹ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ಅವಕಾಶ ನೀಡದಿರುವ ಪೊಲೀಸರ ಕ್ರಮವನ್ನು ಪ್ರಶ್ನಿಸಿದರು.
ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೋಂತಿ ಗಣೇಶ್ ಅವರು ಆನ್‌ಲೈನ್ ವಂಚನೆ, ಡಿಜಿಟಲ್ ಆರೆಸ್ಟ್‌ನಂತಹ ವಿಚಾರಗಳನ್ನು ಪ್ರಸ್ತಾಪಿಸಿದರು.ಆಟೊ ಚಾಲಕರ ಸಂಘದ ಮೇದಪ್ಪ ಅವರು, ಅಕ್ರಮ ಚಟುವಟಿಕೆಗಳ ಕುರಿತು ಠಾಣೆಗೆ ಮಾಹಿತಿ ನೀಡಿ ವಾಪಸ್ ಬರುವಷ್ಟರಲ್ಲಿ ಆರೋಪಿಗಳಿಗೆ ಅದರ ಮಾಹಿತಿ ಸಿಕ್ಕಿರುತ್ತದೆ ಎಂದರು.
ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮಾತನಾಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಇದ್ದರು.