ಎಚ್‌ಐವಿ, ಏಡ್ಸ್ ಬಗ್ಗೆ ಜಾಗೃತರಾಗಿ ಸುಸ್ಥಿರ ಜೀವನ ನಡೆಸಿ

KannadaprabhaNewsNetwork |  
Published : Sep 03, 2025, 01:00 AM IST
ಎಚ್.ಐ.ವಿ. ಏಡ್ಸ್ ಬಗ್ಗೆ ಯುವಜನತೆ ಜಾಗೃತರಾಗಿ, ಸುಸ್ಥಿರ ಜೀವನ ನಡೆಸಿ- ಡಾ. ಎಸ್. ಚಿದಂಬರ | Kannada Prabha

ಸಾರಾಂಶ

ಪ್ರತಿಯೊಬ್ಬರು ಎಚ್‌ಐವಿ, ಏಡ್ಸ್ ಬಗ್ಗೆ ಜಾಗೃತರಾಗಿ ಸುಸ್ಥಿರ ಜೀವನ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರತಿಯೊಬ್ಬರು ಎಚ್‌ಐವಿ, ಏಡ್ಸ್ ಬಗ್ಗೆ ಜಾಗೃತರಾಗಿ ಸುಸ್ಥಿರ ಜೀವನ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸ್ನ್ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎಸ್.ಎಸ್.ಎಸ್, ರೆಡ್ ರಿಬ್ಬನ್ ಕ್ಲಬ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಿಂದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆವರೆಗೆ ಮಂಗಳವಾರ ಏರ್ಪಡಿಸಿದ್ದ ಬೈಕ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದರು.

ಎಚ್‌ಐವಿ, ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐ.ಇ.ಸಿ. ಪ್ರಚಾರಾಂದೋಲನ ೨೦೨೫ರ ಕಾರ್ಯಕ್ರಮದಡಿ ಯುವಜನರು, ಎಲ್ಲಾ ವಯೋಮಾನದವರಿಗೆ ಎಚ್‌ಐವಿ, ಏಡ್ಸ್ ಕುರಿತು ಬೈಕ್ ರ್‍ಯಾಲಿ, ಮ್ಯಾರಥಾನ್, ಸೈಕಲ್ ಜಾಥಾ, ಇತರೆ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಆಯೋಜಿಸಲಾಗುತ್ತಿದೆ. ಯುವಕರು ಕ್ಷಣಿಕ ಸುಖದ ಆಸೆಗಾಗಿ ಎಚ್‌ಐವಿ, ಏಡ್ಸ್‌ನಂತಹ ಮಾರಕ ಕಾಯಿಲೆಗೆ ಒಳಗಾಗದೇ ಸುಸ್ಥಿರ ಜೀವನ ರೂಪಿಸಿಕೊಳ್ಳಬೇಕಾದ ಅವಶ್ಯವಿದೆ. ಈ ನಿಟ್ಟಿನಲ್ಲಿ ಯುವಕರು ತಾವು ಜಾಗೃತರಾಗಿ, ಇತರರಿಗೂ ಅರಿವು ಮೂಡಿಸಬೇಕು ಎಂದರು.

ಏಡ್ಸ್ ಎಂದರೆ ಹಿಂದಿನಂತೆ ಗಾಬರಿ ಬೀಳುವ ಅಗತ್ಯವಿಲ್ಲ. ಅದಕ್ಕಾಗಿ ಪರಿಣಾಮಕಾರಿ ಚಿಕಿತ್ಸಾ ಸೌಲಭ್ಯವಿದೆ. ಅಸುರಕ್ಷಿತ ಲೈಂಗಿಕ ಸಂಪರ್ಕ ಹಾಗೂ ರೋಗಿಗೆ ಚುಚ್ಚಿದ ಸೂಜಿ ಅಥವಾ ಸಿರಿಂಜ್‌ನಿಂದ ಹೆಚ್ಚಾಗಿ ಹರಡುವ ಏಡ್ಸ್ ಕಾಯಿಲೆ ಸಲಿಂಗಕಾಮದಿಂದಲೂ ಹೆಚ್ಚಾಗಿ ಹರಡುವ ಸಾಧ್ಯತೆ ಇದೆ. ಒಬ್ಬರು ಒಬ್ಬ ಸಂಗಾತಿಯೊಂದಿಗೆ ಸಂಪರ್ಕ ಹೊಂದುವ ಮನಸ್ಥಿತಿ ಪ್ರತಿಯೊಬ್ಬರಿಗೂ ಬರಬೇಕು. ಈ ಬಗ್ಗೆ ಸಮುದಾಯಿಕವಾಗಿ ತಿಳಿವಳಿಕೆ ನೀಡುವ ಅಗತ್ಯವಿದೆ ಎಂದು ತಿಳಿಸಿದರು.

ಎಚ್‌ಐವಿ, ಏಡ್ಸ್ ಜಾಗೃತಿ ಕೇವಲ ಇಲಾಖೆಯ ಕೆಲಸ ಮಾತ್ರವಲ್ಲ. ಸಾರ್ವಜನಿಕರು, ಸಂಘಸಂಸ್ಥೆಗಳು ಎಲ್ಲರೂ ಸೇರಿ ಒಂದು ತಂಡವಾಗಿ ಮಾಡುವ ಕೆಲಸವಾಗಿದೆ. ಜಾಗೃತಿಯೂ ಸಹ ಒಂದು ದಿನದ ಕಾರ್ಯಕ್ರಮವಾಗದೇ ನಿರಂತರವಾಗಬೇಕು. ಯಾವುದೇ ವ್ಯಕ್ತಿ ಎಚ್.ಐ.ವಿ ಬಗ್ಗೆ ಅನುಮಾನವಿದ್ದರೆ ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಅಧಿಕಾರಿ ಡಾ. ರವಿಕುಮಾರ್, ಸಿಮ್ಸ್ ಆರ್.ಎಂ.ಒ ಡಾ. ಮಹೇಶ್, ಅರ್ಥೋಪೆಡಿಕ್ ಮುಖ್ಯಸ್ಥರಾದ ಡಾ. ಮಾರುತಿ, ರಕ್ತನಿಧಿ ಕೇಂದ್ರದ ಮಹದೇವಪ್ರಸಾದ್, ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್ ಇದ್ದರು.

PREV

Recommended Stories

ಜಾಗತಿಕ ಮಟ್ಟದಲ್ಲಿ ಸಾಧನೆ ನಾರಿ ಶಕ್ತಿಗೆ ಸಾಕ್ಷಿ
ಮಕ್ಕಳ ಕಲಿಕೆಯನ್ನು ಸೃಜನಾತ್ಮಕವಾಗಿಸಲು ನಲಿ-ಕಲಿ