ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿ

KannadaprabhaNewsNetwork |  
Published : May 10, 2026, 02:00 AM IST
೦೧  ವಿಜೆಪಿ ೦೮ವಿಜಯಪುರ ಪಟ್ಟಣ ಸಮೀಪದ ದೊಡ್ಡ ಮುದ್ದೇನಹಳ್ಳಿ ಗ್ರಾಮದಲ್ಲಿ ಸತ್ಯ ಎಜುಕೇರ್ ಕಾಂಪಿಟೆನ್ಸಿ ಟ್ರಸ್ಟ್ ಮತ್ತು ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ನಿಕಟಪೂರ್ವ ಶಾಸಕ ಡಾ. ನಿಸರ್ಗ ಎಲ್.ಎನ್. ನಾರಾಯಣಸ್ವಾಮಿರವರು.  | Kannada Prabha

ಸಾರಾಂಶ

ವಿಜಯಪುರ: ಗ್ರಾಮೀಣರು ಕಾಯಿಲೆ ಬಂದ ಮೇಲೆ ಚಿಕಿತ್ಸೆಗಾಗಿ ಪರದಾಡುವುದಕ್ಕಿಂತ, ಕಾಯಿಲೆ ಬರುವ ಮುನ್ನವೇ ಮುನ್ನೆಚ್ಚರಿಕೆ ವಹಿಸಿದರೆ ಆಸ್ಪತ್ರೆಗಳ ಅಲೆದಾಟ ಹಾಗೂ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು

ವಿಜಯಪುರ: ಗ್ರಾಮೀಣರು ಕಾಯಿಲೆ ಬಂದ ಮೇಲೆ ಚಿಕಿತ್ಸೆಗಾಗಿ ಪರದಾಡುವುದಕ್ಕಿಂತ, ಕಾಯಿಲೆ ಬರುವ ಮುನ್ನವೇ ಮುನ್ನೆಚ್ಚರಿಕೆ ವಹಿಸಿದರೆ ಆಸ್ಪತ್ರೆಗಳ ಅಲೆದಾಟ ಹಾಗೂ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಸಮೀಪದ ದೊಡ್ಡಮುದ್ದೇನಹಳ್ಳಿಯಲ್ಲಿ ಸತ್ಯ ಎಜುಕೇರ್ ಕಾಂಪಿಟೆನ್ಸಿ ಟ್ರಸ್ಟ್ ಮತ್ತು ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ದುಬಾರಿ ವೆಚ್ಚದ ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಬದಲು, ಸ್ವಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಗ್ರಾಮಸ್ಥರು ಸದ್ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಗೋಣೂರು ಮನೋಹರ್ ಮಾತನಾಡಿ, ನಿಯಮಿತ ಆರೋಗ್ಯ ತಪಾಸಣೆಯಿಂದ ರೋಗಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ಪಡೆಯಲು ಸಾಧ್ಯ ಎಂದರು.

ಈ ವೇಳೆ ಆಕಾಶ್ ಆಸ್ಪತ್ರೆಯ ವ್ಯವಸ್ಥಾಪಕ ವಿ.ರಂಗನಾಥ್‌, ಮಲ್ಲಿಗೆ ಮಕ್ಕಳ ಆಸ್ಪತ್ರೆಯ ಡಾ. ವಿ.ಸಿ.ಮಂಜುನಾಥ್‌, ಬಮೂಲ್ ಮಾಜಿ ನಿರ್ದೇಶಕ ದಂಡಿಗಾನಹಳ್ಳಿ ನಾರಾಯಣಸ್ವಾಮಿ, ಗ್ರಾಪಂ ಸದಸ್ಯ ಎಂ.ಸತೀಶ, ದೊಡ್ಡ ಮುದ್ದೇನಹಳ್ಳಿ ಡೇರಿ ಅಧ್ಯಕ್ಷ ಬಿ.ಬೈಯಣ್ಣ, ಮಾಜಿ ಅಧ್ಯಕ್ಷ ಅಶೋಕ್, ಹಿರಿಯ ಮುಖಂಡ ಸುಬ್ಬಣ್ಣ, ಮುನಿನಾರಾಯಣಪ್ಪ, ಮಲ್ಲಿಗೆ ಮಕ್ಕಳ ಆಸ್ಪತ್ರೆಯ ಕೇಶವ ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನುಕುಲಕ್ಕೆ ಮಾನವೀಯ ಸಂದೇಶ ಸಾರಿದ ಬಸವಣ್ಣ
ಗುಡಿಸಾಗರ ಗ್ರಾಪಂ ವ್ಯಾಪ್ತಿಯಲ್ಲಿ ಮತ್ತೆ ರಾಡಿ ನೀರು ಪೂರೈಕೆ!