ಕನ್ನಡಪ್ರಭ ವಾರ್ತೆ ಪಾಂಡವಪುರ
ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆಯಲ್ಲಿ ಬೂತ ಮಟ್ಟದ ಬಿಎಲ್‌ಒ-1 ಹಾಗೂ 2 ಕಾರ್ಯಕರ್ತರು ಯಾವ ರೀತಿ ಕರ್ತವ್ಯ ನಿರ್ವಹಿಸಬೇಕು, ಬಿಎಲ್‌ಒ ಅಧಿಕಾರಿಗಳು ಕೇಳುವ ದಾಖಲಾತಿ ನೀಡಬೇಕು, 2002ರ ಮತಪಟ್ಟಿ ಹಾಗೂ 2025 ಮತದಾರರ ಪಟ್ಟಿಯನ್ನು ಓಲಿಕೆ ಮಾಡಿ ಪರಿಶೀಲನೆ ನಡೆಸಬೇಕು, ಸಮಸ್ಯೆಗಳು ಕಂಡುಬಂದರೆ ತಕ್ಷಣ ಪಕ್ಷದ ಬಿಎಲ್‌ಒ-1ಗೆ ಮಾಹಿತಿ ನೀಡಬೇಕು ಎನ್ನುವ ಕುರಿತು ಮಾಹಿತಿ ನೀಡಲಾಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಮಾತನಾಡಿ, ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಿದೆ. ಈ ವೇಳೆ ನಮ್ಮ ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಬೂತ್‌ಮಟ್ಟದಲ್ಲಿ ಪಕ್ಷದ ಬಿಎಲ್‌ಒ-2 ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.ಒಂದು ವೇಳೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟು ಹೋಗಿದ್ದರೆ ತಕ್ಷಣ ಬಿಎಲ್‌ಒ ಅಧಿಕಾರಿಗಳ ಗಮನಕ್ಕೆ ತಂದು ಕೇಳುವ ಸೂಕ್ತವಾದ ಮಾಹಿತಿ ನೀಡಿ ಮತ್ತೆ ಮತದಾರರ ಪಟ್ಟಿಗೆ ಸೇರಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ. ಇದರಲ್ಲಿ ಯಾವುದಾದರು ಸಮಸ್ಯೆಗಳು ಕಂಡುಬಂದರೆ ತಕ್ಷಣ ನನ್ನ ಗಮನಕ್ಕೆ ತಂದರೆ ಕ್ರಮವಹಿಸಲಾಗುವುದು ಎಂದರು.
ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜೇಂದ್ರಮೂರ್ತಿ, ಬ್ಲಾಕ್ ಅಧ್ಯಕ್ಷ ಸಂಪಳ್ಳಿ ಉಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್, ಭರತ್‌ಪಟೇಲ್, ಟೌನ್ ಅಧ್ಯಕ್ಷ ಉಮಾಶಂಕರ್, ಎಸ್‌ಸ್ಸಿ ಘಟಕದ ಅಧ್ಯಕ್ಷ ಕಣಿವೆ ರಾಮು, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಡಿ.ಹುಚ್ಚೇಗೌಡ, ರೇವಣ್ಣ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಶ್ರೀಕಾಂತ್, ಮೇಲುಕೋಟೆ ಸೊಸೈಟಿ ಅಧ್ಯಕ್ಷ ಯೋಗನರಸಿಂಹೇಗೌಡ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.