ಕನ್ನಡಪ್ರಭ ವಾರ್ತೆ ಚಡಚಣ
ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಸೋಮವಾರ ಆಯೋಜಿಸಲಾದ ಟಾಸ್ಕ್‌ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಕೊರತೆಯನ್ನು ಕಂಡು ಬಂದಲ್ಲಿ ಅಧಿಕಾರಿಗಳ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸದ ಅವರು, ಬೀಜ ಹಾಗೂ ಗೊಬ್ಬರದ ಕೊರತೆಯಾದರೆ ತಕ್ಷಣ ಕ್ರಮ ಕೈಗೊಂಡು ಎರಡು ಮೂರು ಕೌಂಟರ್ ತೆಗೆದು ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.ಉಪವಿಭಾಗಾಧಿಕಾರಿ ಹಬೀದ ಗದ್ಯಾಳ ಮಾತನಾಡಿ, ತಾಲೂಕಿನ ಕೇಂದ್ರ ಕಚೇರಿಯಲ್ಲಿದ್ದುಕೊಂಡು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ಗಮನಕ್ಕೆ ಇಲ್ಲದೇ ರಜೆ ತೆಗೆದುಕೊಳ್ಳುವಂತಿಲ್ಲ. ರಜೆ ಬೇಕಾದರೂ ನಮ್ಮ ಗಮನಕ್ಕೆ ತರಬೇಕು ಇಲ್ಲದೇ ಹೋದಲ್ಲಿ ಕಾನೂನು ಕ್ರಮ ಗ್ಯಾರಂಟಿ ಎಂದ ಅವರು, ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು.ಇದೇ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನಪ್ಪಿದ ಎಮ್ಮಗಳ ಮಾಲೀಕರಿಗೆ ತಲಾ ₹37500 ಪರಿಹಾರ ವಿತರಿಸಿದರು.