ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ರೈತ ಸಮುದಾಯ ಭವನದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ ಸಂಬಂಧಿಸಿದಂತೆ ಮಾಹಿತಿ ನೀಡಲು ಹಮ್ಮಿಕೊಂಡಿದ್ದ ತರಬೇತಿ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿ, ಅರಂಭವಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗುವ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಓ) ಪರಿಷ್ಕರಣೆ ವೇಳೆ ನಿಗಾ ಇಡಬೇಕೆಂದು ಸಲಹೆ ನೀಡಿದರು.
ಹೊರ ರಾಜ್ಯಗಳಲ್ಲಿ ನಡೆದ ಪರಿಷ್ಕರಣೆ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಕಾಂಗ್ರೆಸ್‌ನ ಸಂಪ್ರದಾಯಿಕ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಡಿಲಿಟ್ ಮಾಡುವ ಷಡ್ಯಂತ್ರ ನಡೆಯಬಹುದು. ಮತದಾರರ ಪಟ್ಟಿಯ ಕೆಲಸಗಳನ್ನು ಸೂಕ್ಷ್ಮವಾಗಿ ಗಮನಿಸಲು ವಿಶೇಷ ವಾರ್ ರೂಮ್ ಸ್ಥಾಪಿಸಲಾಗಿದೆ. ಜೊತೆಗೆ ಜಿಲ್ಲಾವಾರು ಮತ್ತು ವಿಧಾನಸಭಾ ಕ್ಷೇತ್ರವಾರು ವೀಕ್ಷರನ್ನು ನೇಮಕ ಮಾಡಲಾಗಿದೆ. ವ್ಯಾತ್ಯಾಸ ಕಂಡು ಬಂದಲ್ಲಿ ತಕ್ಷಣದಲ್ಲಿಯೇ ಮಾಹಿತಿ ನೀಡಬೇಕೆಂದು ಕರೆ ನೀಡಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಕಾಂಗ್ರೆಸ್ ಮತಗಳು ಪರಿಷ್ಕರಣೆ ವೇಳೆ ಕೈಬಿಟ್ಟು ಹೋಗದಂತೆ ಪಕ್ಷದಿಂದ ಬಿಎಲ್‌ಒಗಳಿಗೆ ತರಬೇತಿ ನೀಡಲಾಗುತ್ತಿದೆ. ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಿ ಸಂವಿಧಾನ ಕೊಟ್ಟಿರುವ ಮತದಾನದ ಹಕ್ಕು ಕಳೆದುಕೊಳ್ಳದ ರೀತಿಯಲ್ಲಿ ಗಮನ ಹರಿಸಬೇಕೆಂದರು.