ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ

KannadaprabhaNewsNetwork |  
Published : Apr 23, 2025, 12:37 AM IST
ಕಂಪ್ಲಿಯ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಪ್ರಗತಿ ಪರಿಶೀಲನೆಯ ವಿಡಿಯೋ ಕಾನ್ಫೆರೆನ್ಸ್ನಲ್ಲಿ ತಹಸೀಲ್ದಾರ್ ಎಸ್.ಶಿವರಾಜ, ಅಧಿಕಾರಿಗಳಾದ ಆರ್.ಕೆ.ಶ್ರೀಕುಮಾರ್, ಶರಣಪ್ಪ, ಡಾ.ಕೆ.ಯು.ಬಸವರಾಜ, ರವಿರಾಥೋಡ್ ಇತರ ಅಧಿಕಾರಿಗಳಿದ್ದರು. | Kannada Prabha

ಸಾರಾಂಶ

ಕಂಪ್ಲಿ ತಾಲೂಕು ಉಸ್ತುವಾರಿ ಅಧಿಕಾರಿ, ಶಿರಸಿಯ ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ ಇತ್ತೀಚೆಗೆ ಅಧಿಕಾರಿಗಳ ಜತೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಅಧಿಕಾರಿಗಳ ಜತೆ ತಾಲೂಕು ಉಸ್ತುವಾರಿ ಅಧಿಕಾರಿ ಕಾವ್ಯಾರಾಣಿ ವಿಡಿಯೋ ಕಾನ್ಫರೆನ್ಸ್‌ ಸಭೆ

ಕನ್ನಡಪ್ರಭ ವಾರ್ತೆ ಕಂಪ್ಲಿ

ಕಂಪ್ಲಿ ತಾಲೂಕು ಉಸ್ತುವಾರಿ ಅಧಿಕಾರಿ, ಶಿರಸಿಯ ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ ಇತ್ತೀಚೆಗೆ ಅಧಿಕಾರಿಗಳ ಜತೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ತಾಲೂಕಿನಲ್ಲಿ ಕುಡಿಯವ ನೀರು, ಜಾನುವಾರುಗಳಿಗೆ ಮೇವು ಲಭ್ಯತೆ ಕುರಿತು ಚರ್ಚಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೆ ತಾಲೂಕಿನಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಬಾರದಂತೆ ಕ್ರಮ ವಹಿಸಬೇಕು ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವ ಕಂಡುಬಂದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಿ, ಜನರಿಗೆ ಸಮರ್ಪಕವಾಗಿ ನೀರು ಪೂರೈಸಬೇಕು ಎಂದು ಸೂಚಿಸಿದರು.

ತಹಸೀಲ್ದಾರ್ ಶಿವರಾಜ್ ಶಿವಪುರ ಮಾತನಾಡಿ, ಕಳೆದ ವರ್ಷ ತಾಲೂಕಿನ ನೆಲ್ಲೂಡಿ, ಮೆಟ್ರಿ, ದೇವಲಾಪುರ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ನೀರಿನ ಕೊರತೆಯಾದಾಗ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಒದಗಿಸಲಾಗಿತ್ತು. ಈ ಬೇಸಿಗೆಯಲ್ಲಿ ದೇವಲಾಪುರ ಗ್ರಾಮದಲ್ಲಿ ನೀರಿನ ಕೊರತೆಯಾಗುವ ಸಾಧ್ಯತೆಯಿದ್ದು, ಖಾಸಗಿ ಬೋರ್‌ವೆಲ್ ಮೂಲಕ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಾನುವಾರುಗಳಿಗೆ ತಕ್ಕ ಪ್ರಮಾಣದ ಮೇವು ಲಭ್ಯತೆಯಿದ್ದು, ಮೇವಿನ ಕೊರತೆಯಿಲ್ಲ ಎಂದು ತಿಳಿಸಿದರು.

ಪರಿಸರ ಅಭಿಯಂತರ ಶರಣಪ್ಪ ಮಾತನಾಡಿ, ಪಟ್ಟಣಕ್ಕೆ ತುಂಗಭದ್ರಾ ನದಿ ನೀರು ಮೂಲವಾಗಿದ್ದು, 23 ವಾರ್ಡ್‌ಗಳಿಗೆ ದಿನ ಬಿಟ್ಟು ದಿನ ಕುಡಿಯುವ ನೀರು ಪೂರೈಸುತ್ತಿದೆ. ಪಟ್ಟಣದ 117 ಬೋರ್‌ವೆಲ್‌ಗಳಲ್ಲಿ 107 ಬೋರ್‌ವೆಲ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಉಳಿದ 10 ಬೋರ್‌ವೆಲ್ ಕಾರ್ಯನಿರ್ವಹಿಸುತ್ತಿಲ್ಲ. ಅದರ ದುರಸ್ತಿಗೆ ಕ್ರಮಕೈಗೊಂಡಿದ್ದೇವೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದು ಎಂದು ತಿಳಿಸಿದರು.

ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.

PREV

Recommended Stories

ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಬೆಂಗಳೂರಲ್ಲಿ ಭರ್ಜರಿ ಮಳೆಗೆ ವಾಹನ ಸವಾರರ ಪರದಾಟ