ಕನ್ನಡಪ್ರಭ ವಾರ್ತೆ ಕಲಬುರಗಿ
ತಮ್ಮ ಕಚೇರಿ ಸಭಾಂಗಣದಲ್ಲಿ ಪಾಲಿಕೆ, ಕೆ.ಯು.ಐ.ಡಿ.ಎಫ್.ಸಿ. ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನಗರದ ಸಾರ್ವಜನಿಕರಿಗೆ ವೇಳಾಪಟ್ಟಿಯಂತೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ನೀರು ಪೂರೈಕೆ ಬಗ್ಗೆ ಮುಂಚಿತವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಸೋಮವಾರದೊಳಗೆ ಮೈಕ್ರೋ ಪ್ಲ್ಯಾನ್ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಡಿ.ಸಿ ನಿರ್ದೇಶನ ನೀಡಿದರು.
ನಗರದಲ್ಲಿ ಯಾವುದೇ ವಾರ್ಡ್ ನಲ್ಲಿ ಕಲುಷಿತ ನೀರು ಸೇವನೆಯಿಂದ ಅಹಿತಕರ ಘಟನೆ ನಡೆದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು. ಶುದ್ಧ ಕುಡಿಯುವ ನೀರು ಪೂರೈಕೆ ನಿಮ್ಮ ಮೊದಲ ಆದ್ಯತೆಯಾಗಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ನಿರು ಪೂರೈಕೆ ಟ್ಯಾಂಕ್ ಗಳನ್ನು ಆಗಾಗ ಸ್ವಚ್ಚಗೊಳಿಸಬೇಕು. ಅಧಿಕಾರಿಗಳು ನಿರಂತರ ಭೇಟಿ ನೀಡಿ ಸ್ವಚ್ಛತೆ ಕುರಿತು ಖಾತ್ರಿಪಡಿಸಿಕೊಳ್ಳಬೇಕು ಎಂದರು.ಇನ್ನೇನು 15 ದಿನದಲ್ಲಿ ಮಳೆಗಾಲ ಆರಂಭವಾಗಲಿದೆ. ಕೂಡಲೆ ನಗರದ ಎಲ್ಲಾ ವಾರ್ಡುಗಳ ಚರಂಡಿ ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹೊಗುವಂತಾಗಬೇಕು. ಬ್ಲಾಕೇಜ್ ಗಳಿದಲ್ಲಿ ಕೂಡಲೆ ತೆರವುಗೊಳಿಸಬೇಕು ಎಂದರು.
ಕಲಬುರಗಿ ನಗರದ 55 ವಾರ್ಡುಗಳಿಗೆ 24 ಗಂಟೆ ನಿರಂತರ ಕುಡಿಯುವ ನೀರು ಪೂರೈಸುವ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ವೇಗ ಪಡೆಯದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಡಿ.ಸಿ. ಅವರು, ಕೂಡಲೆ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಕಾಮಗಾರಿ ಚುರುಕುಗೊಳಿಸಬೇಕು ಎಂದು ಕಂಪನಿಯ ಟೀಮ್ ಲೀಡರ್ ಕುಮಾರ ಸೇನ್ ಅವರಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕೆ.ಯು.ಐ.ಎಫ್.ಡಿ.ಸಿ. ಕಾರ್ಯನಿರ್ವಾಹಕ ಅಭಿಯಂತರರುಗಳಾದ ಕೆ.ಎಸ್.ಪಾಟೀಲ, ಶಿವಕುಮಾರ ಪಾಟೀಲ ಸೇರಿದಂತೆ ಪಾಲಿಕೆ ಮತ್ತು ಕೆ.ಯು.ಐ.ಎಫ್.ಡಿ.ಸಿ. ಅಧಿಕಾರಿ-ಸಿಬ್ಬಂದಿ ಇದ್ದರು.