ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮಾನವ ಹಕ್ಕುಗಳ ರಕ್ಷಕರು ಎಂಬುದನ್ನು ಮರೆಯಬಾರದು. ಸಾರ್ವಜನಿಕರು ತಮ್ಮ ಕಚೇರಿಗೆ ಭೇಟಿ ನೀಡಿದಾಗ ಅವರ ಕಷ್ಟಗಳನ್ನು ಆಲಿಸಿ ಸೌಜನ್ಯದಿಂದ ವರ್ತಿಸಿದರೆ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗುತ್ತವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿದಾಗ ಅಲ್ಲಿನ ವ್ಯವಸ್ಥೆಗಳು ತೃಪ್ತಿಕರವಾಗಿದೆ. ಮಿಮ್ಸ್ ಗೆ ಭೇಟಿ ನೀಡಿದ್ದು, ಅಲ್ಲಿ ವೈದ್ಯರ ಕೊರತೆ ಕಂಡುಬಂದಿದೆ. ವೈದ್ಯರ ನೇಮಕಾತಿ ರಾಜ್ಯ ಮಟ್ಟದಲ್ಲಿ ನಡೆಯಬೇಕಿದೆ. ಈ ಬಗ್ಗೆ ಆಯೋಗ ಶಿಫಾರಸ್ಸು ಮಾಡಲಿದೆ ಎಂದರು.ಮಾನವ ಹಕ್ಕುಗಳ ಆಯೋಗದ ಹೆಸರಿನಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿಕೊಂಡು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಹಣದ ಬೇಡಿಕೆ ಇಡುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ದೂರು ಸಲ್ಲಿಸಿ ಎಂದು ಹೇಳಿದರು.
ರಾಜ್ಯ ಮಾನವ ಹಕ್ಕುಗಳ ಆಯೋಗದ ಹಿಂದಿನ ಅಧ್ಯಕ್ಷರು ಹಾಗೂ ಸದಸ್ಯರು 2023ರ ಫೆಬ್ರವರಿಯಲ್ಲಿ ನಿವೃತ್ತರಾದರು. ನಂತರ ಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷರು ನೇಮಕವಾಗಲು 8 ತಿಂಗಳು ಬೇಕಾಯಿತು. ಈ ಅವಧಿಯಲ್ಲಿ ಸಲ್ಲಿಕೆಯಾದ 5400 ಅರ್ಜಿಗಳು ಹಾಗೂ ನೇಮಕಾತಿಯಾದ ನಂತರ ಸಲ್ಲಿಕೆಯಾದ 6417 ಪ್ರಕರಣಗಳು ಸೇರಿಕೊಂಡವು. ಆಯೋಗವು ಒಂದು ವರ್ಷದ ಅವಧಿಯಲ್ಲಿ ಸುಮಾರು 8777 ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಈಗ 3000 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು.
ಹಾಸ್ಟೆಲ್ ಗಳಲ್ಲಿ ಡ್ರೆಸಿಂಗ್ ರೂಂ ವ್ಯವಸ್ಥೆ ಮಾಡಿ:
ಆಯೋಗಕ್ಕೆ ಸಲ್ಲಿಕೆಯಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಪತ್ರ ಬರೆದು ಕೇಳುವ ದಾಖಲೆಗಳನ್ನು ಶೀಘ್ರ ಕಳುಹಿಸಿಕೊಡಿ. ಇದರಿಂದ ಪ್ರಕರಣಗಳನ್ನು ಬೇಗ ಇತ್ಯರ್ಥಪಡಿಸಬಹುದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಆಯೋಗದ ಜೊತೆ ಸರ್ಕಾರಿ ಅಧಿಕಾರಿಗಳೆಲ್ಲರೂ ಕೈ ಜೋಡಿಸಿ ಮಾನವ ಹಕ್ಕುಗಳ ಸಂರಕ್ಷಣೆ ಮಾಡಬೇಕು. ಮಾನವೀಯತೆ ಹಾಗೂ ಹೃದಯವಂತಿಕೆ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ ಎಂದರು.
ಸಭೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್, ಜಿಪಂ ಸಿಇಒ ಕೆ.ಆರ್. ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.