ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘ ಜಿಲ್ಲಾ ಪೊಲೀಸ್ ಇಲಾಖೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಪರಾಧ ತಡೆ ಹಾಗೂ ಜನಜಾಗೃತಿ ಅಭಿಯಾನ-2026 ಕಾರ್ಯಕ್ರಮದಲ್ಲಿ ಮಾತನಾಡಿ, ಇಂದು ಮೊಬೈಲ್ ಹಾವಳಿ ಹೆಚ್ಚಾಗಿದ್ದು ಇದರಿಂದ ಸಾಕಷ್ಟು ಅಪರಿಚಿತರು ಕಳುಹಿಸುವ ಅನುಮಾನಾಸ್ಪದ ಲಿಂಕ್‌ಗಳಿಂದ ಬ್ಯಾಂಕುಗಳಲ್ಲಿನ ಹಣ ಖಾಲಿಯಾಗಲಿದೆ. ಈ ಬಗ್ಗೆ ಎಚ್ಚರ ವಹಿಸುವುದು ಅತಿ ಸೂಕ್ತ. ಸಂಚಾರಿ ನಿಯಮ ಪಾಲಿಸುವುದರ ಜೊತೆಗೆ ಅಪರಿಚಿತರ ಬಗ್ಗೆ ತೀವ್ರ ನಿಗಾ ಇಡಬೇಕು. ಅನುಮಾನ ಬಂದ ವ್ಯಕ್ತಿಗಳ ಬಗ್ಗೆ ಹತ್ತಿರದ ಪೊಲೀಸರಿಗೆ ಸುಳಿವು ನೀಡಬೇಕು. ಈ ಮೂಲಕ ಅಪರಾಧ ತಡೆಯಬಹುದು ಎಂದರು.
ಯಾವುದೇ ಅಪರಾಧ ತಡೆಯಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕಾರ ನೀಡಿದಾಗ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಬಹುದು. ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಲ್ಲಿ ಜನರು ಜಾಗೃತಿ ಮೂಡಿಸಿಕೊಂಡು ಅಪರಾಧ ತಡೆಯಲು ಇತರರಲ್ಲೂ ಜಾಗೃತಿ ಮೂಡಿಸಬೇಕು. ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.ಕರ್ನಾಟಕ ಕೃಷಿ ಕೂಲಿಕಾರರು ಮತ್ತು ಗ್ರಾಮೀಣ ಕಾರ್ಮಿಕರ ಜಿಲ್ಲಾ ಅಧ್ಯಕ್ಷ ಎಂ.ಪಿ. ಮುನಿವೆಂಕಟಪ್ಪ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪೋಷಕರು ಅವರೊಂದಿಗೆ ಮುಕ್ತವಾಗಿ ಮಾತನಾಡಿ ವಿದ್ಯಾಭ್ಯಾಸ ಕಲಿಯುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಗೀಳಿಗೆ ದೂಡಬೇಡಿ. ಪೋಷಕರು ಹೆಚ್ಚು ಜಾಗರೂಕರಾಗಿ ಮಕ್ಕಳ ಚಲನವಲನ ಗಮನಿಸುತ್ತಿರಬೇಕು. ಬಹು ಮುಖ್ಯವಾಗಿ ಇಂದಿನ ಸಮಾಜದಲ್ಲಿ ಬಾಲ್ಯ ವಿವಾಹಗಳಂತಹ ಅನಿಷ್ಟವನ್ನು ದೂರಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ ಎಂದರು.
ವಿದ್ಯಾರ್ಥಿನಿಯರಿಗೆ ಸನ್ಮಾನ:
ಈ ಸಂದರ್ಭದಲ್ಲಿ ಕದಸಂಸ(ಅಂಬೇಡ್ಕರ್ ವಾದ) ಸಂಘಟನಾ ಸಂಚಾಲಕ ಸುಧಾ ವೆಂಕಟೇಶ್, ಸಿಡಿಪಿಓ ಮಹಮ್ಮದ್ ಉಸ್ಮಾನ್, ಕೆಪಿಆರ್ ಗೌರವಾಧ್ಯಕ್ಷ ಬಿ.ಎನ್ ಮುನಿಕೃಷ್ಣಪ್ಪ, ಜಿಲ್ಲಾ ಗೌರವಾಧ್ಯಕ್ಷ ಚಿಕ್ಕಲಕ್ಷ್ಮಪ್ಪ, ತಾಲೂಕು ಗೌರವಾಧ್ಯಕ್ಷ ಜಿ.ಎಂ. ವೆಂಕಟೇಶ್ ಮತ್ತಿತರರು ಇದ್ದರು.
ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಅಪರಾಧ ತಡೆ ಹಾಗೂ ಜನಜಾಗೃತಿ ಅಭಿಯಾನ-2026 ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.