ಮತದಾರರ ಪಟ್ಟಿ ಪಾರದರ್ಶಕವಾಗಿರುವಂತೆ ಜಾಗರೂಕತೆ ವಹಿಸಿ: ರೂಪಾಲಿ ನಾಯ್ಕ

KannadaprabhaNewsNetwork |  
Published : Jun 10, 2026, 02:30 AM IST
ರೂಪಾಲಿ ನಾಯ್ಕ ಅವರನ್ನು ಸತ್ಕರಿಸಲಾಯಿತು | Kannada Prabha

ಸಾರಾಂಶ

ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಮತದಾರರ ಪಟ್ಟಿ ಪಾರದರ್ಶಕವಾಗಿರುವಂತೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ನೇಮಕ ಮಾಡಿದ ತಂಡಗಳು ಜಾಗರೂಕರಾಗಿರಬೇಕು.

ಬಿಎಲ್ ಓ 2, ಬೂತ್ ಅಧ್ಯಕ್ಷರು, ಸದಸ್ಯರ ತಂಡಗಳು ಹಾಗೂ ಮಹಿಳಾ ಪ್ರಮುಖರ ಸಭೆ

ಕನ್ನಡಪ್ರಭ ವಾರ್ತೆ ಕಾರವಾರ

ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಮತದಾರರ ಪಟ್ಟಿ ಪಾರದರ್ಶಕವಾಗಿರುವಂತೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ನೇಮಕ ಮಾಡಿದ ತಂಡಗಳು ಜಾಗರೂಕರಾಗಿರಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಮನವಿ ಮಾಡಿದರು.

ಕಾರವಾರದ ಬಿಜೆಪಿ ಕಾರ್ಯಾಲಯದಲ್ಲಿ (ಸುಭಾಷಚಂದ್ರ ಬೋಸ್ ಮತ್ತು ಚಂದ್ರಶೇಖರ ಅಜಾದ್ ಮಹಾಶಕ್ತಿ ಕೇಂದ್ರ ವ್ಯಾಪ್ತಿ) ಹಾಗೂ ನಂದನಗದ್ದಾ ಗಣಪತಿ ದೇವಾಲಯ ಸಭಾಭವನದಲ್ಲಿ (ಭಗತ್ ಸಿಂಗ್ ಮಹಾಶಕ್ತಿ ಕೇಂದ್ರ ವ್ಯಾಪ್ತಿ) ಸೋಮವಾರ ಸಂಜೆ ನಡೆದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಬಿಎಲ್ ಓ 2, ಬೂತ್ ಅಧ್ಯಕ್ಷರು, ಸದಸ್ಯರ ತಂಡಗಳು ಹಾಗೂ ಮಹಿಳಾ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮತದಾರರ ಪಟ್ಟಿ ಪಾರದರ್ಶಕವಾಗಿರಬೇಕು. ಈ ನಿಟ್ಟಿನಲ್ಲಿ ರಚಿಸಲಾದ ತಂಡಗಳ ಸದಸ್ಯರು, ಬಿಎಲ್ ಓ 2, ಬೂತ್ ಅಧ್ಯಕ್ಷರು ಸೇರಿ ಎಲ್ಲರೂ ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಪ್ರಭಾರಿ ರಾಜು ಭಂಡಾರಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ರವಿರಾಜ ಅಂಕೋಲೆಕರ, ರಾಜ್ಯ ಪ್ರಕೋಸ್ಟದ ಸುನೀಲ ಸೋನಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನಕಾರ್ಯದರ್ಶಿಗಳು ಮತ್ತಿತರರು ಪಾಲ್ಗೊಂಡಿದ್ದರು. ರೂಪಾಲಿಗೆ ಸನ್ಮಾನ:

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರನ್ನು ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪಕ್ಷದ ಸಂಘಟನಾ ಸಂಯೋಜಕರನ್ನಾಗಿ ನಿಯುಕ್ತಿಗೊಳಿಸಿದ ಬಗ್ಗೆ ಬಿಜೆಪಿ ಕಾರ್ಯಕರ್ತರು ರೂಪಾಲಿ ಎಸ್.ನಾಯ್ಕ ಅವರನ್ನು ಸಂಭ್ರಮದಿಂದ ಸತ್ಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟೇಶ್ವರ: ಸರ್ವೀಸ್ ರಸ್ತೆ ಅಗಲೀಕರಣಕ್ಕೆ ಅಶೋಕ್ ಪೂಜಾರಿ ಒತ್ತಾಯ
ಪ್ರಕೃತಿ ವಿಕೋಪ ನಿರ್ವಹಣೆ: ಡಾ. ಮಂತರ್‌ ಗೌಡ ಸೂಚನೆ