ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು ದೃಶ್ಯಗಳು ಮತ್ತು ಸಂದೇಶ ಕಳುಹಿಸುವಾಗ ಬಹು ಎಚ್ಚರಿಕೆ ವಹಿಸಬೇಕು. ಮಹಿಳಾ ದೌರ್ಜನ್ಯಗಳ ಬಗ್ಗೆ ಕೇವಲ ಕಾನೂನುಗಳಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ. ಈ ವಿಷಯದಲ್ಲಿ ನಮ್ಮ ಮನಸ್ಥಿತಿ ಬದಲಾದರೆ ಮಾತ್ರ ಸಮಾಜ ಸುಧಾರಣೆ ತರಲು ಸಾಧ್ಯ.
ಕನ್ನಡಪ್ರಭ ವಾರ್ತೆ ಮದ್ದೂರು
ವಿದ್ಯಾರ್ಥಿನಿಯರು ಶೈಕ್ಷಣಿಕ ಹಂತದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೆಟ್ಟ ದೃಶ್ಯಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಎಂ.ಶ್ರುತಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನದ ದಿನದ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು ದೃಶ್ಯಗಳು ಮತ್ತು ಸಂದೇಶ ಕಳುಹಿಸುವಾಗ ಬಹು ಎಚ್ಚರಿಕೆ ವಹಿಸಬೇಕು. ಮಹಿಳಾ ದೌರ್ಜನ್ಯಗಳ ಬಗ್ಗೆ ಕೇವಲ ಕಾನೂನುಗಳಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ. ಈ ವಿಷಯದಲ್ಲಿ ನಮ್ಮ ಮನಸ್ಥಿತಿ ಬದಲಾದರೆ ಮಾತ್ರ ಸಮಾಜ ಸುಧಾರಣೆ ತರಲು ಸಾಧ್ಯ ಎಂದರು.
ತಮ್ಮ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಮತ್ತು ಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸಮಾನತೆ ಹಕ್ಕುಗಳ ಬಗ್ಗೆ ಮೊದಲು ಧ್ವನಿ ಎತ್ತುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕ ಪ್ರೀತಮ್ ಡೇವಿಡ್ ಮಾತನಾಡಿ, ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಲಿಂಗ ಆಧಾರಿತ ಹಿಂಸಾಚಾರ ಮತ್ತು ದೌರ್ಜನ್ಯದ ವಿರುದ್ಧ ಎಷ್ಟೇ ಜಾಗೃತಿ ಕಾನೂನು ಕಾಯ್ದೆಗಳನ್ನು ಜಾರಿಗೆ ತಂದರು ಸಹ ಅದನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಧ್ಯವಾಗುತ್ತಿಲ್ಲ. ಇಂಥ ವಿಷಯಗಳ ಬಗ್ಗೆ ಪೋಷಕರು ಮತ್ತು ಮಹಿಳೆಯರು ಎಚ್ಚರಿಕೆ ವಹಿಸಬೇಕು ಎಂದರು.
ಕುಟುಂಬ, ಶಾಲಾ,ಕಾಲೇಜು, ಮತ್ತು ಕಾರ್ಯಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ನಿರ್ಮಿಸುವ ಜೊತೆಗೆ ಮಹಿಳಾ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು ದೌರ್ಜನ್ಯದ ಪ್ರಕರಣಗಳನ್ನು ಮಚ್ಚಿ ಹಾಕದೆ ಪೊಲೀಸ್, ಸಹಾಯಕ ವಾಣಿಗಳು ಅಥವಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಅತ್ಯಗತ್ಯ ವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾನೂನು ಸಲಹೆಗಾರರಾದ ಎಚ್.ಬಿ.ನಾಗೇಶ್, ಎ.ಪ್ರಸನ್ನ ಸಂಪನ್ಮೂಲ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲೆ ಎ.ಸಿ.ಗೀತಾ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಕಾರ್ಯದರ್ಶಿ ಎಂ. ಜೆ.ಸುಮಂತ್, ಕಾಲೇಜಿನ ಆಧ್ಯಾಪಕ ವರ್ಗದವರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.