ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

KannadaprabhaNewsNetwork | Published : Apr 23, 2025 12:32 AM

ಸಾರಾಂಶ

ಅಧಿಕಾರಿ ಹಾಗೂ ಸಿಬ್ಬಂದಿ ಕಚೇರಿಯ ಕಡತಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿಗೊಳಿಸಬೇಕು. ಕೆಲಸದಲ್ಲಿ ಪ್ರಾಮಾಣಿಕತೆ, ಶ್ರದ್ಧೆ ಮೈಗೂಡಿಸಿಕೊಳ್ಳಬೇಕು.

ಹಾವೇರಿ: ಸರ್ಕಾರದ ಮಹತ್ತರ ಯೋಜನೆ ಹಾಗೂ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ನಡೆದುಕೊಳ್ಳುವ ಜತೆಗೆ ಪಾರದರ್ಶಕ ಆಡಳಿತ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ಸರ್ಕಾರಿ ನೌಕರರ ಸಂಘ ಹಾವೇರಿ ಶಾಖೆ ಸಹಯೋಗದಲ್ಲಿ ಜರುಗಿದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.ಅಧಿಕಾರಿ ಹಾಗೂ ಸಿಬ್ಬಂದಿ ಕಚೇರಿಯ ಕಡತಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿಗೊಳಿಸಬೇಕು. ಕೆಲಸದಲ್ಲಿ ಪ್ರಾಮಾಣಿಕತೆ, ಶ್ರದ್ಧೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ಜಿಲ್ಲೆಯ ಅಧಿಕಾರಿ ಹಾಗೂ ನೌಕರರ ಸೇವೆ ಶ್ಲಾಘನೀಯವಾಗಿದೆ ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಕಾರ್ಯಕ್ರಮ ಉದ್ಘಾಟಿಸಿ, ಸನ್ಮಾನಿತರಿಗೆ ಶುಭ ಕೋರಿದರು. ಸರ್ವೋತ್ತಮ ಸೇವಾ ಪ್ರಶಸ್ತಿತರಿಗೆ ಸನ್ಮಾನ:೨೦೨೩- ೨೪, ೨೦೨೪- ೨೫ ಮತ್ತು ೨೦೨೫- ೨೬ನೇ ಸಾಲಿನ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದ ೩೦ ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ೨೦೨೩ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದ ರಾಣಿಬೆನ್ನೂರು ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ಡಾ. ನಾಗರಾಜ ಎಲ್., ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಪೂಜಾರ, ಜಿಲ್ಲಾಡಳಿತ ಭವನದ ಭೂ ದಾಖಲೆಗಳ ಉಪನಿರ್ದೇಶಕ ರೂಪಕುಮಾರ, ಹಾನಗಲ್ಲ ಗ್ರೇಡ್- ೨ ತಹಸೀಲ್ದಾರ್ ರವಿಕುಮಾರ ಕೊರವರ, ಜಿಲ್ಲಾಧಿಕಾರಿಗಳ ಕಚೇರಿ ಶಿರಸ್ತೇದಾರ ಪ್ರಕಾಶ ಎಚ್.ಎಸ್., ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರದಸ ಶಾಂತವ್ವ ತಿಮ್ಮಜ್ಜಿ, ಜಿಲ್ಲಾಧಿಕಾರಿಗಳ ಕಚೇರಿ ವಾಹನ ಚಾಲಕ ಪರಮೇಶಿ ಲಮಾಣಿ, ಅಂದಲಗಿ ಗ್ರಾಪಂ ಪಿಡಿಒ ರಾಜು ಹರಿಜನ, ಜಿಲ್ಲಾ ಆಸ್ಪತ್ರೆ ಹಿರಿಯ ಫಾರ್ಮಸಿ ರಾಜು ಲಮಾಣಿ ಹಾಗೂ ಸಹಕಾರಿ ಇಲಾಖೆ ಸಂಗಪ್ಪ ಅರಳಿ ಅವರನ್ನು ಸನ್ಮಾನಿಸಲಾಯಿತು.೨೦೨೪ನೇ ಸಾಲಿಗೆ ಹಾನಗಲ್ಲ ತಹಸೀಲ್ದಾರ ರೇಣುಕಮ್ಮ, ಜಿಪಂ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ವಿ. ಕೆ., ತುಂಗಾ ಮೇಲ್ದಂಡೆ ಯೋಜನೆ ಉಪ ವಿಭಾಗ- ೩ ಕರ್ನಾಟಕ ನೀರಾವರಿ ನಿಗಮದ ಸಹಾಯಕ ನಿರ್ದೇಶಕ ಅಭಿಯಂತರ ರಾಮಕೃಷ್ಣ ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಎಎಒ ಪರಮೇಶ್ವರ ಬಾಳಿಕಾಯಿ, ಡಿಎಚ್‌ಒ ಕಚೇರಿಯ ಅಧೀಕ್ಷಕ ಶಶಿಧರ ಎ.ಜೆ., ಜಿಲ್ಲಾಧಿಕಾರಿಗಳ ಕಚೇರಿಯ ಎಸ್‌ಡಿಎ ಜಿ.ಎಸ್. ಪಾಟೀಲ, ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿ ಅಧೀಕ್ಷಕ ಶ್ರೀಪಾದ ಬ್ಯಾಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ಹೊನ್ನವ್ವ ಬಸವನಾಯಕ್, ಜಿಲ್ಲಾಧಿಕಾರಿಗಳ ಕಚೇರಿಯ ಮುರುಗೇಶ ಜವಳಿ, ಸಮಾಜ ಕಲ್ಯಾಣ ಇಲಾಖೆಯ ಬಸಪ್ಪ ಸುಣಗಾರ ಅವರನ್ನು ಸನ್ಮಾನಿಸಲಾಯಿತು.ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರ ಕಚೇರಿ ಪರಿವೀಕ್ಷಣಾ ಅಧಿಕಾರಿ ಮುನಿಶ್ವರ ಹನುಮಂತಪ್ಪ ಚೂರಿ ಅವರನ್ನು ಆಯ್ಕೆ ಮಾಡಲಾಗಿದೆ.೨೦೨೫ನೇ ಸಾಲಿಗೆ ಜಿಲ್ಲಾ ಪಂಚಾಯಿತಿ ಸಿಎಒ ವಸಂತಕುಮಾರ ಎ., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಸರಿತಾ ಎಂ., ಹಾನಗಲ್ಲ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಂಗಾ ಹಿರೇಮಠ, ಹಿರೇಕೆರೂರು ತಾಪಂ ಸಹಾಯಕ ನಿರ್ದೇಶಕ ನಾಗರಾಜಪ್ಪ ಹಡಗಲಿ, ಸಿ ಮತ್ತು ಡಿ ದರ್ಜೆ ನೌಕರರಾದ ಬ್ಯಾಡಗಿ ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಪ್ಪಗೋಳ, ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯ ಪ್ರದಸ ಎಂ.ಎಲ್. ಹಿರೇಬಿದರಿ, ಜಿಪಂ ಅಧೀಕ್ಷಕ ಬಾಪುಗೌಡ ಪಾಟೀಲ, ರಟ್ಟಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವಾಹನ ಚಾಲಕ ದೀಪಕ್ ಎಸ್.ಕೆ., ಜಿಲ್ಲಾ ಸತ್ರ ನ್ಯಾಯಾಲಯದ ವಾಹನ ಚಾಲಕ ರಾಜು ಹಾವಣಗಿ, ಜಿಲ್ಲಾಧಿಕಾರಿಗಳ ಕಚೇರಿಯ ಪರಮೇಶಿ ಗಚ್ಚಿನ ಅವರನ್ನು ಸನ್ಮಾನಿಸಲಾಯಿತು.ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಜಿಲ್ಲಾ ಮಕ್ಕಳ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಅವರನ್ನು ಆಯ್ಕೆ ಮಾಡಲಾಗಿದೆ.ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ, ಉಪ ವಿಭಾಗಾಧಿಕಾರಿ ಚೆನ್ನಪ್ಪ, ತಹಸೀಲ್ದಾರ್ ಶರಣಮ್ಮ, ಜಿಲ್ಲಾ ಕಾರ್ಯದರ್ಶಿ ಜಿ.ಎಸ್. ಪಾಟೀಲ, ಖಜಾಂಚಿ ದಾವಲಸಾಬ ಕಮಗಲ, ರಾಜ್ಯ ಪರಿಷತ್ ಸದಸ್ಯ ಮುನೀಶ್ವರ ಚೂರಿ ಇತರರು ಇದ್ದರು.

Share this article