ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಮಿನಿ ವಿಧಾನಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಿ ಖಡಕ್ ಸೂಚನೆ ನೀಡಿ, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳದ್ದು ದೊಡ್ಡ ಸಮಸ್ಯೆಯಾಗಿದೆ. ರೈತರು, ಸಾರ್ವಜನಿಕರಿಗೆ ಸಾಲ ನೀಡುವ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಾತಿ ಮಾಡುವಾಗ ದಬ್ಬಾಳಿಕೆ, ಒತ್ತಡ ಹಾಕುವುದು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಕ್ರೋ ಫೈನಾನ್ಸ್‌ಗಳಿಗೆ ಹೆದರಿ ಸಾರ್ವಜನಿಕರು ಊರುಗಳನ್ನೇ ಬಿಟ್ಟು ಬೇರೆಡೆ ಗುಳೆ ಹೋಗುವ ಸ್ಥಿತಿ ಎದುರಾಗಿದೆ. ಇದರಿಂದ ಆ ಕುಟುಂಬದ ಮಕ್ಕಳ ಭವಿಷ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ನೀಡುವ ಮೊದಲ, ಸಾಲ ಪಡೆಯುತ್ತಿರುವ ಗ್ರಾಹಕರಿಗೆ ಸಾಲದ ಅವಶ್ಯಕತೆ ಇದೆಯಾ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಸಾಲ ಪಡೆಯುತ್ತಿರುವ ವ್ಯಕ್ತಿಗಳ ಸಾಲದ ಹಣವನ್ನು ಅವರ ಅವಶ್ಯಕತೆಗೆ ಬಳಕೆ ಮಾಡಿಕೊಳ್ಳುತ್ತಾರೆಯೇ?, ಸಾಲ ಪಡೆದು ಬೇರೆಯವರಿಗೆ ನೀಡುತ್ತಾರಾ? ಎನ್ನುವ ಬಗ್ಗೆ ಮಾಹಿತಿ ಪಡೆದುಕೊಂಡು ಸಾಲ ನೀಡಬೇಕು ಎಂದರು.
ಸಹಕಾರ ಸಂಘಗಳಲ್ಲಿ ಭ್ರಷ್ಟಾಚಾರ:
ಬೇಬಿಬೆಟ್ಟ ಜಾತ್ರೆ ಆರಂಭ:
ತಾಲೂಕಿನ ಬೇಬಿ ಬೆಟ್ಟದಲ್ಲಿ ಫೆ.26 ರಿಂದ ಮಾರ್ಚ್ 5 ರವರೆಗೆ ಬಾರಿ ದನಗಳ ಜಾತ್ರೆ ನಡೆಯಲಿದೆ. ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿ ರಾಸುಗಳಿಗೆ ಬೇಕಾದ ಮೂಲ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಮಾರ್ಚ್ 2ರಂದು ಉಚಿತ ಸರಳ ಸಾಮೂಹಿಕ ವಿವಾಹ ಮಹೋತ್ಸವ ಏರ್ಪಡಿಸಲಾಗಿದೆ ಎಂದರು.ಸಭೆಯಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್, ಪುರಸಭೆ ಸದಸ್ಯ ಶಿವಕುಮಾರ್, ಕಾಂಗ್ರೆಸ್ ಮುಖಂಡ ಸಿ.ಆರ್.ರಮೇಶ್ ಹಾಜರಿದ್ದರು.