ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ 2026-27ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ವಾಗ್ಮಿ ಅಶೋಕ ಹಂಚಲಿ ಮಾತನಾಡಿ, ಒಬ್ಬ ಪೇಪರ್ ಹಾಕುವ ಹುಡುಗ ಈ ದೇಶಕ್ಕೆ ರಾಷ್ಟ್ರಪತಿಯಾಗುತ್ತಾನೆಂದ ಮೇಲೆ ನಮಗೇನಾಗಿದೆ ಎನ್ನುವ ಪ್ರಶ್ನೆಯನ್ನು ನಾವೇ ಮಾಡಿಕೊಳ್ಳಬೇಕು. ಕಾದ ಹಂಚಿನ ಮೇಲೆ ಬಿದ್ದ ನೀರಿನ ಹನಿಯೂ ಸಹ ಮುತ್ತಂತೆ ಭಾಸವಾಗುತ್ತದೆ. ಮುಂಜಾನೆ ಬಿದ್ದ ಮಂಜಿನ ಹನಿ ಬಿಸಿಲೇರಿದಂತೆ ಮುತ್ತಂತೆ ಹೊಳೆದು ಮಾಯವಾಗುತ್ತದೆ. ಆದರೆ ಸ್ವಾತಿ ಮಳೆಯ ಹನಿ ಕಪ್ಪೆ ಚಿಪ್ಪಿನಲ್ಲಿ ಬಿದ್ದಾಗ ಮಾತ್ರ ಅದು ಮುತ್ತಾಗಿ ಪರಿವರ್ತನೆಯಾಗುತ್ತದೆ ಅದು ಶಾಶ್ವತ ಮೌಲ್ಯ ಪಡೆಯುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಸಹ ಇಂದು ಎಕ್ಸಲಂಟ್ ಎನ್ನುವ ಕಪ್ಪೆ ಚಿಪ್ಪಿನಲ್ಲಿ ಬಿದ್ದಾಗಿದೆ. ಇನ್ನು ಮುತ್ತಾಗುವುದು ಮಾತ್ರ ಬಾಕಿ ಇದೆ ಎಂದು ಹೇಳಿದರು.ಬಸವನ ಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತಮಾಡಿ, ಹುಟ್ಟು ಅನಿಶ್ಚಿತ ಸಾವು ಖಚಿತ. ಅದರ ನಡುವಿನ ಸಮಯದಲ್ಲಿ ಸಾಧನೆ ಮಾಡಿ ಶಾಶ್ವತವಾಗಿ ಉಳಿಯುವುದು ಸಾರ್ಥಕ ಬದುಕಾಗುತ್ತದೆ. ತಮ್ಮ ಹೆತ್ತವರ ಕನಸನ್ನು ಈಡೇರಿಸುವುದು ಪ್ರತಿಯೊಬ್ಬ ಮಗನ ಕನಸಾಗಿರುತ್ತದೆ. ಆ ಕನಸನ್ನು ನನಸು ಮಾಡುವ ಕಡೆಗೆ ಸದಾ ತುಡಿತವಿರಲಿ. ಅದರ ಜೊತೆಗೆ ಓದಿನ ಮಿಡಿತವಿರಲಿ ಆಗ ಬದುಕು ಬಂಗಾರವಾಗುತ್ತದೆ ಎಂದು ಹೇಳಿದರು.
ಕೂಡಿಗಿ ಸರ್ಕಾರಿ ಪ.ಪೂ ಕಾಲೇಜಿನ ಪ್ರಾಂಶುಪಾಲ ಕೆ.ಜಿ. ಲಮಾಣಿ, ಎಕ್ಸಲಂಟ್ ವಿಜ್ಞಾನ ಪದವಿ ಪ.ಪೂ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಜುನಗೊಂಡ, ಶೈಕ್ಷಣಿಕ ಸಂಯೋಜಕ ಮಂಜುನಾಥ ತುಮ್ಮರಮಟ್ಟಿ ಸೇರಿ ಎಲ್ಲ ಉಪನ್ಯಾಸಕರು, ಸಿಬ್ಬಂದಿ ಇದ್ದರು.
ವಿದ್ಯೆ ಎನ್ನುವುದು ತಪಸ್ಸಿದ್ದಂತೆ. ಸಂತರು, ಋಷಿಮುನಿಗಳು ಏಕಾಗ್ರತೆಯಿಂದ ತಪಸ್ಸು ಮಾಡಿ ಆತ್ಮ ಸಾಕ್ಷಾತ್ಕಾರ ಮಾಡಿಕೊಂಡಂತೆ ವಿದ್ಯಾರ್ಥಿಗಳು ಸಹ ವಿದ್ಯೆ ಎನ್ನುವ ತಪಸ್ಸನ್ನು ಏಕಾಗ್ರತೆಯಿಂದ ಮಾಡಿದಲ್ಲಿ ಸಾಧನೆ ಎನ್ನುವ ಸಾಕ್ಷತ್ಕಾರ ಹೊಂದಬಹುದು. ಕತ್ತೆ ಕುದುರೆಯಾದರೆ ಸರಿ ಆದರೆ ಕುದುರೆ ಎಂದಿಗೂ ಕತ್ತೆಯಾಗಬಾರದು. ಹಾಗೆಯೇ ನೀವೂ ಸಹ ಸಾಧನೆಯ ಹಾದಿಯಲ್ಲಿ ಹೆಜ್ಜೆ ಹಾಕಬೇಕೇ ವಿನಃ ಏನಾದರೂ ಸಮಸ್ಯೆ ಆಯಿತೆಂದು ಮುಂದಿಟ್ಟ ಹೆಜ್ಜೆ ಹಿಂದಿಡಬಾರದು.