ನೆರೆ ಹಾವಳಿ ಎದುರಿಸಲು ಸಜ್ಜಾಗಿ

KannadaprabhaNewsNetwork |  
Published : Jun 22, 2024, 12:50 AM IST
ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಅರಳಿಮಠ ಮಾತನಾಡಿದರು. ತಹಸೀಲ್ದಾರ್‌ ರಾಜೇಶ ಬುರ್ಲಿ, ಎಇಒ ಈರಣ್ಣ ವಾಲಿ ಇದ್ದರು. | Kannada Prabha

ಸಾರಾಂಶ

ಕಾಗವಾಡ ತಾಲೂಕಿನಲ್ಲಿ ಎದುರಾಗಲಿರುವ ಸಂಭ್ಯಾವ್ಯ ನೆರೆ ಹಾವಳಿಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಿ ಮತ್ತು ನರೇಗಾ ಸೇರಿದಂತೆ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿ ಎಂದು ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಅರಳಿಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಕಾಗವಾಡ

ತಾಲೂಕಿನಲ್ಲಿ ಎದುರಾಗಲಿರುವ ಸಂಭ್ಯಾವ್ಯ ನೆರೆ ಹಾವಳಿಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಿ ಮತ್ತು ನರೇಗಾ ಸೇರಿದಂತೆ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿ ಎಂದು ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಅರಳಿಮಠ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ತಾಲೂಕಿನ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ವರ್ಷದ ಖರ್ಚು ವೆಚ್ಚಗಳ ಅನುಗುಣವಾಗಿ ಈ ವರ್ಷದ ಕ್ರಿಯಾ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.ಈ ಸಮಯದಲ್ಲಿ ತಹಸೀಲ್ದಾರ್‌ ರಾಜೇಶ ಬುರ್ಲಿ, ತಾಲೂಕು ಪಂಚಾಯತಿ ಎಇಒ ಈರಣ್ಣ ವಾಲಿ, ಕೃಷಿ ಇಲಾಖೆಯ ನಿಂಗಣ್ಣ ಬಿರಾದರ, ಅರಣ್ಯ ಇಲಾಖೆಯ ಪ್ರಶಾಂತ ಗಂಗಧರ, ನೀರಾವರಿ ಇಲಾಖೆಯ ಕೆ.ರವಿ ಸೇರಿದಂತೆ ತಾಲೂಕು ಪಂಚಾಯತಿನ ಎಲ್ಲ ಅಧಿಕಾರಿಗಳು, ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು, ಎಲ್ಲ ಗ್ರಾಮ ಪಂಚಾಯತಿಯ ಪಿಡಿಒಗಳು, ತಾಲೂಕಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಜೆಎಂ ಕಳಪೆ ಕಾಮಗಾರಿ ಬಿಲ್ ಪಾವತಿ ಬೇಡ
ದೇಶದಲ್ಲಿ ಎರಡು ಕೋಟಿ ಜನರಿಂದ ಮಾತ್ರ ತೆರಿಗೆ ಪಾವತಿ