ಮತದಾನ ಪ್ರಮಾಣ ಹೆಚ್ಚಳಕ್ಕೆ ಮುಂದಾಗಿ

KannadaprabhaNewsNetwork | Published : Apr 8, 2024 1:05 AM

ಸಾರಾಂಶ

ವಿಜಯಪುರ: ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ರಿಯಾತ್ಮಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ರಿಯಾತ್ಮಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಜಿಲ್ಲಾ ಪಂಚಾಯತಿ ಹಾಗೂ ವಿಜಯಪುರ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮತದಾರರ ಪ್ರತಿಜ್ಞಾವಿಧಿ ಕೋಣೆಯ ಉದ್ಘಾಟಿಸಿ ಅವರು ಮಾತನಾಡಿ, ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಮತದಾನವು ಶೇ.100ರಷ್ಟು ಆಗಬೇಕು. ಅದಕ್ಕಾಗಿ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅನೇಕ ಜನರು ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುತ್ತಾರೆ. ಅಂತಹವರನ್ನು ಕರೆ ಮಾಡುವ ಮೂಲಕ ಸಂಪರ್ಕಿಸಿ ಅವರಿಗೂ ಸಹ ಮತದಾನದ ಕುರಿತು ಮಾಹಿತಿ ನೀಡಿ ಮತದಾನದಲ್ಲಿ ಭಾಗಿಯಾಗವಹಿಸುವಂತೆ ಪ್ರೇರೇಪಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಜನತೆಗೆ ಮತದಾನ ಮಾಡಲು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಪಾಲಿಕೆ ಆಯುಕ್ತ ಅಶದ ಉರ್ ರೆಹಮಾನ್ ಶರೀಫ್, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ.ಆರ್.ಮುಂಡರಗಿ, ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ತಹಸೀಲ್ದಾರ್ ಕವಿತಾ, ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ ಬಿ ಅಲ್ಲಾಪೂರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾಧಿಕಾರಿ ರಾಜಶೇಖರ ಧೈವಾಡಿ, ಜಿಪಂ. ಸಿಬ್ಬಂದಿ ಎಎಸ್ಒ ರಾವ್ ಬಹದ್ದೂರ್ ಬಾಗವಾನ, ಸುರೇಶ ಕೊಂಡಗುಳಿ, ಸುವರ್ಣ ಭಜಂತ್ರಿ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ತಹಸೀಲ್ದಾರ್‌ ಕಾರ್ಯಾಲಯಗಳ ಸಿಬ್ಬಂದಿ ಭಾಗವಹಿಸಿದ್ದರು..

Share this article