ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ತಾಲೂಕಿನ ದೊಡ್ಡಸಿದ್ದವನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಹಳೆ ವಿದ್ಯಾರ್ಥಿಗಳಿಂದ ನಿರ್ಮಿತವಾಗುತ್ತಿರುವ ಸಭಾಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಓದಿದ ಅದೆಷ್ಟೋ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಗಳಲ್ಲಿ ಇದ್ದಾರೆ ಎಂಬುದನ್ನು ಮನನ ಮಾಡಿಕೊಳ್ಳಿ ಎಂದರು.
ಮಕ್ಕಳಿಗೆ ಮನೆಯಲ್ಲಿ ತಾಯಿಯೇ ಮೊದಲ ಶಿಕ್ಷಕಿ. ನಂತರದ ಜೀವನದ ವೃತ್ತಿಯಲ್ಲಿ ಶಿಕ್ಷಕರು ಅತ್ಯಂತ ಪ್ರಮುಖರಾಗಿದ್ದಾರೆ. ಶಿಕ್ಷಕರು ಅದೆಷ್ಟೋ ವಿದ್ಯಾರ್ಥಿಗಳಿಗೆ ಅಕ್ಷರ ದಾನ ಮಾಡುವುದರ ಜ್ಞಾನದ ಸಂಪತ್ತನ್ನು ಬಿತ್ತುತ್ತಿದ್ದಾರೆ. ಶಾಲಾ-ಕಾಲೇಜುಗಳ ಹಂತದಲ್ಲಿ ವಿದ್ಯಾರ್ಥಿಗಳಿಗೆ ತಿದ್ದಿ-ಬುದ್ದಿ ಹೇಳಿ ಸನ್ಮಾರ್ಗದಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವಲ್ಲಿ ಸಾಕಷ್ಟು ಪಾತ್ರವನ್ನು ಶಿಕ್ಷಕರು ವಹಿಸಿದ್ದಾರೆ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತೊಡಗಿಕೊಳ್ಳಬೇಕೆನ್ನುವುದು ಸಹ ಮನದಟ್ಟಾಗುವ ರೀತಿಯಲ್ಲಿ ಶಿಕ್ಷಕರು ಬೋಧಿಸುತ್ತಿದ್ದಾರೆ. ಇಂತಹ ಶಿಕ್ಷಕರ ಜೊತೆಗಿರುವೆ. ಶಾಲೆಗೆ ನಾಲ್ಕು ಕೊಠಡಿಗಳ ನಿರ್ಮಿಸಿಕೊಡುವೆ ಎಂದರು.ದೊಡ್ಡಸಿದ್ದವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ನೀಡುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಗತ್ಯವಾಗಿ ಬೇಕಿರುವಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.