ಶಿವಮೊಗ್ಗ: ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಬೇಕು ಎಂದು ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್ ಮೂರ್ತಿ ಹೇಳಿದರು.ಇಲ್ಲಿನ ಎಟಿಎನ್‌ಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ ಕುಮಾರ್, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಹೋದರತೆ ಮತ್ತು ಸಾಮರಸ್ಯತೆಯನ್ನು ಮೂಡಿಸುತ್ತದೆ. ಪಠ್ಯಚಟುವಟಿಕೆಗಳ ಜೊತೆಗೆ ಪಕ್ಷೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ರೋಟರಿ ಪೂರ್ವ ಕಾರ್ಯದರ್ಶಿ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಧನಂಜಯ ಅವರನ್ನು ಸನ್ಮಾನಿಸಲಾಯಿತು.ಪ್ರಾಂಶುಪಾಲೆ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಸಂಚಾಲಕ ಪ್ರೊ.ಕೆ.ಎಂ.ನಾಗರಾಜ್, ಐಕ್ಯೂಎಸಿ ವಿಭಾಗದ ಪ್ರೊ. ಎನ್.ಮಂಜುನಾಥ್, ಪ್ರೊ.ಸೌರ್ಪಣಿಕಾ ಉಮೇಶ್, ಪ್ರೊ.ನವೀನ್ ತೇಲ್ಕರ್, ಪ್ರೊ.ಕೆ.ಶೃತಿ, ಪ್ರೊ.ಎಂ.ಕೆ.ಶ್ರೀಲಲತಾ ಮತ್ತಿತರರಿದ್ದರು.------------------
ಪೊಟೊ: 28ಎಸ್‌ಎಂಜಿಕೆಪಿ08ಪೊಟೊ: 28ಎಸ್‌ಎಂಜಿಕೆಪಿ08