ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಿ: ಎಸ್ಪಿ ಕವಿತಾ

KannadaprabhaNewsNetwork |  
Published : Aug 06, 2024, 12:33 AM IST
5ಸಿಎಚ್‌ಎನ್‌56 ಹನೂರು ತಾಲೂಕಿನ ತಮಿಳುನಾಡಿನ ಗಡಿ ಚೆಕ್ ಪೋಸ್ಟ್‌ಗಳನ್ನು  ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಟಿ ಕವಿತಾ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಪಾಲಾರ್ ಹಾಗೂ ತಮಿಳುನಾಡು ಗಡಿ ಚೆಕ್‌ಪೋಸ್ಟ್‌ಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಪಾಲಾರ್ ಹಾಗೂ ತಮಿಳುನಾಡಿನ ಗಡಿ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸ್‌ ಅಧಿಕಾರಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಹನೂರು ಪಾಲಾರ್ ಹಾಗೂ ತಮಿಳುನಾಡು ಗಡಿ ಚೆಕ್‌ಪೋಸ್ಟ್‌ಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಪಾಲಾರ್ ಹಾಗೂ ತಮಿಳುನಾಡಿನ ಗಡಿ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸ್ ಅಧಿಕಾರಿ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮವಹಿಸುವ ಮೂಲಕ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಿದರು.

ತಮಿಳುನಾಡಿನ ಹಾಗೂ ಕರ್ನಾಟಕದ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಪೋಲಿಸ್ ಇಲಾಖೆ ಕಟ್ಟಚರ ವಹಿಸುವ ಮೂಲಕ ದಿನನಿತ್ಯ ಇಲ್ಲಿ ನೂರಾರು ವಾಹನಗಳು ಹೋಗಿ ಬರುವುದರಿಂದ ಇಲ್ಲಿ ವಾಹನಗಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಗಡಿಭಾಗ ಆಗಿರುವುದರಿಂದ ಇಲ್ಲಿನ ಬೇಟೆಗಾರರ ಹಾಗೂ ವಿವಿಧ ಅಕ್ರಮ ಚಟುವಟಿಕೆ ನಡೆಸುವವರ ಬಗ್ಗೆ ನಿಗಾವಹಿಸುವ ಮೂಲಕ ತಮಿಳುನಾಡಿನ ಗಡಿ ಗ್ರಾಮಗಳಲ್ಲಿ ಎಚ್ಚರಿಕೆ ವಹಿಸುವುದರ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಹೊಗೇನಕಲ್‌ಗೆ ಭೇಟಿ: ಗಡಿ ಗ್ರಾಮ ಹೊಗೇನಕಲ್ ಕಾವೇರಿ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಬಗ್ಗೆ ಪೊಲೀಸ್ ಅಧಿಕಾರಿ ಸಿಬ್ಬಂದಿಯಿಂದ ವರಿಷ್ಠಾಧಿಕಾರಿಗಳು ಮಾಹಿತಿ ಪಡೆದುಕೊಂಡು ಗ್ರಾಮಗಳ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಕಾವೇರಿ ನದಿಯಲ್ಲಿ ಹೆಚ್ಚಿನ ನೀರು ಹರಿಯುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳಲ್ಲಿರುವ ಜನತೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದರು.

ಹುತಾತ್ಮ ಪೊಲೀಸ್ ಅಧಿಕಾರಿಗಳ ಸ್ಮಾರಕಕ್ಕೆ ನಮನ: ದಂತಚೋರ ವೀರಪ್ಪನ್ ಕಾರ್ಯಾಚರಣೆ ವೇಳೆ ನಾಲ್ವರು ಪೋಲಿಸ್ ಅಧಿಕಾರಿಗಳಾದ ದಿನೇಶ್ ರಾಮಲಿಂಗಂ ಚಂದಪ್ಪ ಹಾಗೂ ಜನಾರ್ಧನ್ 1990ರಲ್ಲಿ ಕಾರ್ಯಾಚರಣೆ ವೇಳೆ ವೀರಪ್ಪನ್‌ನಿಂದ ಹತ್ಯೆಯಾಗಿ ಹುತಾತ್ಮರಾದ ಸ್ಥಳದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.

ಇದೇ ವೇಳೆಯಲ್ಲಿ ಮಲೆ ಮಾದೇಶ್ವರ ಬೆಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಎಎನ್ಎಸ್ ಜಿಲ್ಲಾ ಪೊಲೀಸ್ ತಂಡ ಸಿಂಗಂ ನಾಗರಾಜ್ ಜೈ ಶಂಕರ್ ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ