ಕನ್ನಡಪ್ರಭ ವಾರ್ತೆ ಜಮಖಂಡಿ
ಗಿರೀಶ ನಗರದ ನೂಲಿ ಚಂದಯ್ಯ ಸಮುದಾಯ ಭವನದಲ್ಲಿ ಬುಧವಾರ ನಡೆದ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕಾಯಕ ರತ್ನ ಮಹಿಳಾ ಸೇವಾ ಸಂಘದ ಆಶ್ರಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರು ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಅರಿವು ಹೊಂದಬೇಕು. ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಉಳಿತಾಯ ಯೋಜನೆಗಳು, ಸಾಲ ಸೌಲಭ್ಯಗಳು, ಸ್ವ ಉದ್ಯೋಗಕ್ಕೆ ನೆರವಾಗುವ ಆರ್ಥಿಕ ಯೋಜನೆಗಳು ಹಾಗೂ ಇತರ ಬ್ಯಾಂಕಿಂಗ ಸೇವೆಗಳನ್ನು ಬಳಸಿಕೊಂಡು ಜೀವನಮಟ್ಟ ಸುಧಾರಿಸಿಕೊಳ್ಳಬೇಕು. ಹಣಕಾಸಿನ ವ್ಯವಹಾರಗಳಲ್ಲಿ ಜ್ಞಾನ ಮತ್ತು ಜಾಗೃತಿ ಹೊಂದುವುದು ಮಹಿಳೆಯರ ಸ್ವಾವಲಂಬನೆಗೆ ಸಹಕಾರಿಯಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬ್ಯಾಂಕಿಂಗ ಸೌಲಭ್ಯಗಳ ಕುರಿತು ಅರಿವು ಮೂಡಿಸಿ, ಆರ್ಥಿಕ ಸ್ವಾವಲಂಬನೆ ಸಾಧಿಸುವಂತೆ ಪ್ರೇರಣೆ ನೀಡಲಾಯಿತು. ಪ್ರವೀಣ.ಎಸ್. ಹಾಗೂ ಮಹಿಳಾ ಸೇವಾ ಸಂಘದ ಪದಾಧಿಕಾರಿಗಳು ಇದ್ದರು.