ಕನ್ನಡಪ್ರಭ ವಾರ್ತೆ ಬೆಂಗಳೂರು
ಭಾನುವಾರ ಅರಮನೆ ಮೈದಾನದಲ್ಲಿ ಕೌಶಲ್ಯಾಭಿವೃದ್ದಿ ಇಲಾಖೆ ಆಯೋಜಿಸಿದ್ದ ‘ವಿದೇಶದಲ್ಲಿ ಅಧ್ಯಯನ-2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದೇಶದಲ್ಲಿ ಅಧ್ಯಯನ ಯೋಜನೆ ಅಡಿ 80ಕ್ಕೂ ಹೆಚ್ಚು ವಿದೇಶಿ ವಿವಿಗಳು ಭಾಗವಹಿಸಿದ್ದು, 300ಕ್ಕೂ ಹೆಚ್ಚು ವಿಷಯಗಳಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 3,145 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಕ್ವೀನ್ಸ್‌ಲ್ಯಾಂಡ್ ವಿವಿ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ತೆರಳುವ ವಿದ್ಯಾರ್ಥಿಗಳಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ವಿದ್ಯಾರ್ಥಿವೇತನ ಹಾಗೂ ವಿವಿಧ ಬ್ಯಾಂಕ್‌ಗಳ ಮೂಲಕ ಎರಡು ಕೋಟಿ ರು.ಗಳವರೆಗೆ ಶಿಕ್ಷಣ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದ ಅವರು, ಸಿಲಿಕಾನ್ ವ್ಯಾಲಿ ಕ್ಯಾಲಿಫೋರ್ನಿಯದಲ್ಲಿ 16 ಲಕ್ಷ ಐಟಿ ವೃತ್ತಿಪರರು ಇದ್ದಾರೆ. ಆದರೆ, ಬೆಂಗಳೂರಿನಲ್ಲಿ 26 ಲಕ್ಷ ಐಟಿ ವೃತ್ತಿಪರರು ಕಾರ್ಯನಿರ್ವಹಿಸುತ್ತಿದ್ದಾರೆ. 38 ಅಂತಾರಾಷ್ಟ್ರೀಯ ಶಾಲೆಗಳಿವೆ. ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರ್‌ಗಳು ಹಾಗೂ 13,940 ವೈದ್ಯರು ರಾಜ್ಯದಿಂದ ಹೊರಬರುತ್ತಿದ್ದು, ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾನವ ಸಂಪನ್ಮೂಲವನ್ನು ಬೇರೆ ಎಲ್ಲೂ ತಯಾರಿಸುತ್ತಿಲ್ಲ. ಕರ್ನಾಟಕವು ದೇಶದ ಪ್ರಮುಖ ಜ್ಞಾನ ಕೇಂದ್ರವಾಗಿದೆ ಎಂದು ಹೇಳಿದರು.ಶಿಕ್ಷಕರಿಗೆ ಗೌರವ:
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ರಾಜ್ಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ವಿದೇಶಗಳಲ್ಲಿ ಅಧ್ಯಯನ ಮಾಡಲಿಚ್ಛಿಸಿದರೆ ನೇರವಾಗಿ ಅಲ್ಲಿನ ವಿವಿ ಜತೆ ಮಾತುಕತೆ ನಡೆಸುವಂತೆ ಮಾಡಲು ಈ ಯೋಜನೆ ರೂಪಿಸಲಾಗಿದೆ. ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ಆಮಿಷವೊಡ್ಡಿ ವಿದ್ಯಾರ್ಥಿಗಳಿಗೆ ಮೋಸ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಆದ್ದರಿಂದ ಕೌಶಲ್ಯಾಭಿವೃದ್ಧಿ ಇಲಾಖೆ ವೇದಿಕೆ ಕಲ್ಪಿಸಿಕೊಡಲು ತೀರ್ಮಾನಿಸಿ ಈ ಯೋಜನೆ ಕೈಗೊಂಡಿದೆ ಎಂದರು.