ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದಲ್ಲೇ ಬೆಳಗಾವಿ ನಗರ ಆಯ್ಕೆ

KannadaprabhaNewsNetwork |  
Published : Nov 14, 2026, 02:45 AM IST
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಮಾರ್ಟ್ ಸಿಟಿ ಯೋಜನೆಯ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಅಭಯ ಪಾಟೀಲ, ಆಸೀಫ್ ಸೇಠ್, ಮೇಯರ್ ಪ್ರೀತಿ ಕಾಮಕರ್, ಉಪಮೇಯರ್ ಹನುಮಂತ ಕೊಂಗಾಲಿ ಮತ್ತಿತರರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದಲ್ಲಿಯೇ ಬೆಳಗಾವಿ ಮಹಾನಗರ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಯೋಜನೆಯಡಿ ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಬೆಳಗಾವಿ ನಗರವನ್ನು ಮಾದರಿಯ ನಗರವನ್ನಾಗಿ ರೂಪಿಸಬೇಕು ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದಲ್ಲಿಯೇ ಬೆಳಗಾವಿ ಮಹಾನಗರ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಯೋಜನೆಯಡಿ ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಬೆಳಗಾವಿ ನಗರವನ್ನು ಮಾದರಿಯ ನಗರವನ್ನಾಗಿ ರೂಪಿಸಬೇಕು ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಗರದ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಸಿಟಿಜನ್ 2.0 ಯೋಜನೆಯ ನಗರ ಮಟ್ಟದ ಪಾಲುದಾರರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್‌ ಸಿಟಿ ಯೋಜನೆಯ ತಾಂತ್ರಿಕ ಸಮಿತಿಯ ಅನುಮೋದನೆಗೆ ತೆರಳುವ ಮುನ್ನ ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ನಗರದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಲಹೆಗಳನ್ನು ನೀಡಿದರು.

ಶಾಸಕ ಆಸೀಫ್ ಸೇಠ್ ಮಾತನಾಡಿ, ಯೋಜನೆಯಡಿ ಬೆಳಗಾವಿ ನಗರದಲ್ಲಿ ದೀರ್ಘಕಾಲಿಕ ಪ್ರಯೋಜನ ನೀಡುವ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಲಹೆ, ಸೂಚನೆಗಳನ್ನು ಪಡೆದು ಪರಿಣಾಮಕಾರಿಯಾಗಿರುವ ಯೋಜನೆ ರೂಪಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮೇಯರ್ ಪ್ರೀತಿ ಕಾಮಕರ್ ಮಾತನಾಡಿ, ನಗರದ ಅಭಿವೃದ್ಧಿಗೆ ಬೆಳಗಾವಿ ಮಹಾನಗರ ಪಾಲಿಕೆಯ ಸಂಪೂರ್ಣ ಸಹಕಾರವಿದೆ. ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಜಂಟಿಯಾಗಿ ಉತ್ತಮ ಕಾರ್ಯಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಉಪ ಮೇಯರ್ ಹನುಮಂತ ಕೊಂಗಾಲಿ ಮಾತನಾಡಿ, ಯೋಜನೆಯಿಂದ ಮಹಾನಗರದ ಜನರಿಗೆ ನೇರವಾಗಿ ಉಪಯೋಗವಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಳ್ಳಬೇಕು ಎಂದರು.ಪಾಲಿಕೆ ಆಯುಕ್ತರು ಹಾಗೂ ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಕಾರ್ತಿಕ್.ಎಂ ಮಾತನಾಡಿ, ಸಭೆಯಲ್ಲಿ ವ್ಯಕ್ತವಾದ ಎಲ್ಲ ಸಲಹೆ, ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಯೋಜನೆಯಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.ಬಳಿಕ ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೇಯಸ್ ನಾಕಾಡಿ, ರಮೇಶ ಮೈಲುಗೋಳ, ಸಾರಿಕಾ ಪಾಟೀಲ, ನಗರ ಸೇವಕರಾದ ಸಂದೀಪ ಜೀರಗ್ಯಾಳ, ಶಾಹಿದ್ ಖಾನ್ ಪಠಾಣ, ಸಾಮಾಜಿಕ ಕಾರ್ಯಕರ್ತ ಮಂಜುನಾಥ ಬನಶಂಕರಿ, ವಿಟಿಯು ಕುಲಸಚಿವ ಪ್ರಸಾದ ರಾಂಪುರೆ ಸೇರಿದಂತೆ ಹಲವರು ಚರ್ಚೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸ್ಮಾರ್ಟ್ ಸಿಟಿ ಅಭಿಯಂತರ ಕಾಂಚನ.ಎಂ ಪ್ರಾತ್ಯಕ್ಷಿಕೆ ಮೂಲಕ ಯೋಜನೆಯ ಕುರಿತಾದ ಮಾಹಿತಿ ನೀಡಿದರು. ಪಾಲಿಕೆಯ ಅಭಿವೃದ್ಧಿ ಶಾಖೆಯ ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾನಿಕರ್, ಪರಿಸರ ಶಾಖೆಯ ಅಭಿಯಂತರ ಹಣಮಂತ ಕಲಾದಗಿ, ಸ್ಥಾಯಿ ಸಮಿತಿ ಸದಸ್ಯರು, ನಗರ ಸೇವಕರು ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ