ಕನ್ನಡಪ್ರಭ ವಾರ್ತೆ ಬೆಳಗಾವಿ
ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು, ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ಮೊತ್ತವನ್ನು ಕಾಲಮಿತಿಯೊಳಗೆ ಒದಗಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಟೆಂಡರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿವಿಧ ಪ್ಯಾಕೇಜ್ ಗಳಲ್ಲಿ 500 ಎಕರೆ ಭೂಸ್ವಾಧೀನ ಮಾಡಬೇಕಿತ್ತು. ಅದರಲ್ಲಿ ಈಗಾಗಲೇ 40 ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಜಮೀನು ಭೂಸ್ವಾಧೀನ ಮಾಡಿಕೊಂಡ ಬಳಿಕವೇ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವುದು ಉತ್ತಮ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣವಾದ ಬಳಿಕವೇ ಟೆಂಡರ್ ಪ್ರಕ್ರಿಯೆ ನಡೆಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಕಾನೂನು ಪರಿಮಿತಿಯೊಳಗೆ ರೈತರ ಜತೆ ಚರ್ಚೆ ನಡೆಸಿ ಮೊದಲ ಪ್ಯಾಕೇಜ್‌ಗೆ ಸಂಬಂಧಿಸಿದಂತೆ 2 ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ನಂತರ 2ನೇ ಪ್ಯಾಕೇಜ್ ಪ್ರಕ್ರಿಯೆ ಆರಂಭಿಸಬೇಕು ಎಂದು ಶೆಟ್ಟರ್ ಸೂಚನೆ ನೀಡಿದರು.ಬೆಳಗಾವಿ ರಿಂಗ್ ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.ಸ್ಮಾರ್ಟ್ ಸಿಟಿಗೆ ಸಂಬಂಧಿಸಿದಂತೆ ನಗರದಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ನಿರ್ವಹಣೆಯು ಗುತ್ತಿಗೆದಾರರ ಜವಾಬ್ದಾರಿಯಾಗಿದ್ದು, ಕಳಪೆ ಕಾಮಗಾರಿ, ಸೂಕ್ತ ನಿರ್ವಹಣೆ ಆಗದೇ ಇದ್ದರೆ ಸಂಬಂಧಿಸಿದ ಗುತ್ತಿಗೆದಾರರಿಗೆ ದಂಡ ವಿಧಿಸಲು ಅವಕಾಶವಿದ್ದು ಈ ಕುರಿತು ಕ್ರಮ ಜರಿಗಿಸಬೇಕು ಎಂದು ಸೂಚಿಸಿದರು.ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನೆ, ಮನರೇಗಾ, ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಜಿಲ್ಲೆ ಅತ್ಯುತ್ತಮ ಸ್ಥಾನದಲ್ಲಿರುವ ಕುರಿತು ಸಂಸದರ ಗಮನಕ್ಕೆ ತಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಗತ್ಯ ಜಮೀನು ಒದಗಿಸಲಾಗಿದ್ದು, ಕಾಂಪೌಂಡ್ ನಿರ್ಮಿಸಿ ಗ್ರಾಮಸ್ಥರಿಗೆ ರಸ್ತೆ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಪ್ರಾಧಿಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಬೇಕಿದೆ ಎಂದು ವಿವರಿಸಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ಗುಡಗುಂಟಿ, ಡಿ.ಸಿ.ಪಿ. ರೋಹನ್ ಜಗದೀಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರೈಲ್ವೆ, ಕೆ.ಎ.ಐ.ಡಿ.ಬಿ, ವಿಮಾನ ನಿಲ್ದಾಣ, ಜಲಜೀವನ್ ಮಿಷನ್, ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.