ದೇಶಾದ್ಯಂತ ಕಾಂಗ್ರೆಸ್‌ ಗೆಲ್ಲೋದು 40 ಸೀಟು ಮಾತ್ರ: ವಿಜಯೇಂದ್ರ

Published : May 05, 2024, 10:41 AM IST
BY Vijayendra

ಸಾರಾಂಶ

ಕಾಂಗ್ರೆಸ್ ಪಕ್ಷದವರು ಅಧಿಕಾರ, ಹಣದ ಬಲದಿಂದ ಗೆಲ್ಲಲು ಹೊರಟಿದ್ದಾರೆ. ಅಪ್ಪಿತಪ್ಪಿ ರಾಜ್ಯದಲ್ಲಿ ಕಾಂಗ್ರೆಸ್ ಒಂದೆರಡು ಸೀಟು ಗೆದ್ದರೂ ದೇಶಾದ್ಯಂತ ಕಾಂಗ್ರೆಸ್ ಗೆಲ್ಲೋದು 40 ಸೀಟು ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬೆಳಗಾವಿ :  ಕಾಂಗ್ರೆಸ್ ಪಕ್ಷದವರು ಅಧಿಕಾರ, ಹಣದ ಬಲದಿಂದ ಗೆಲ್ಲಲು ಹೊರಟಿದ್ದಾರೆ. ಅಪ್ಪಿತಪ್ಪಿ ರಾಜ್ಯದಲ್ಲಿ ಕಾಂಗ್ರೆಸ್ ಒಂದೆರಡು ಸೀಟು ಗೆದ್ದರೂ ದೇಶಾದ್ಯಂತ ಕಾಂಗ್ರೆಸ್ ಗೆಲ್ಲೋದು 40 ಸೀಟು ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್‌.ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಅವರು ಪ್ರಚಾರ ನಡೆಸಿದರು. ಯಡಿಯೂರಪ್ಪ ಸಿಎಂ ಆಗುವ ಮುನ್ನ ರಾಜ್ಯದಲ್ಲಿ ಬರಗಾಲವಿತ್ತು. ಯಡಿಯೂರಪ್ಪ ಸಿಎಂ ಆದ ನಂತರ ಮಹಾಪ್ರವಾಹ ಆಗಿ ಬೆಳೆ, ಮನೆ ಎಲ್ಲವೂ ಹಾನಿಯಾಗಿತ್ತು. ಆಗ ಯಡಿಯೂರಪ್ಪ ಏಕಾಂಗಿಯಾಗಿದ್ದರು. ಕ್ಯಾಬಿನೇಟ್ ಸಹ ಇನ್ನೂ ಆಗಿರಲಿಲ್ಲ. ಪ್ರತಿ ಹೆಕ್ಟೇರ್‌ಗೆ ₹14000, ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಕೊಟ್ಟಿದ್ದರು. ಈಗಲೂ ಬರಗಾಲ ಇದೆ. ಆದರೆ, ಕಾಂಗ್ರೆಸ್ ಸರ್ಕಾರ ರೈತರಿಗೆ ಬರಿ ₹2000 ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿವೇಶನ ನಡೆಯುವ ಸಂದರ್ಭದಲ್ಲಿ ಬೆಳಗಾವಿ ತಾಲೂಕಿನಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಯಿತು. ಅಲ್ಲಿಗೆ ಯಾವ ಸಚಿವರು, ಶಾಸಕರು ಹೋಗಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮಾಡಲಿಲ್ಲ. ಬಳಿಕ, ನೇಹಾ ಹತ್ಯೆ ಪ್ರಕರಣ ನಡೆಯಿತು. ಮೊನ್ನೆಯಷ್ಟೆ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಆಗಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ಸುವ್ಯವಸ್ಥೆ ‌ಸಂಪೂರ್ಣ ಹಾಳಾಗಿದೆ ಎಂದು ಆರೋಪಿಸಿದರು.

PREV

Recommended Stories

ಲಿಂಬೆಹಣ್ಣು, ಮೊಸರನ್ನದ ಜೊತೆಗೆ ಸ್ಮಾರ್ಟ್‌ಫೋನ್ ಇಟ್ಟು ವಾಮಾಚಾರ!
ಯುವಕರು ದುಶ್ಚಟಗಳ ದಾಸರಾಗುತ್ತಿರುವುದು ವಿಷಾದನೀಯ