ಪ್ರೇಮಿ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ

Published : Oct 12, 2025, 10:14 AM IST
lalitpur sisters husband swap love affair viral story

ಸಾರಾಂಶ

ಪ್ರಿಯತಮನೊಂದಿಗೆ ಮಗಳು ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ತಂದೆ, ಮಗಳ ತಿಥಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.

 ಚಿಕ್ಕೋಡಿ :  ಪ್ರಿಯತಮನೊಂದಿಗೆ ಮಗಳು ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ತಂದೆ, ಮಗಳ ತಿಥಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ನಾಗರಾಳ ಗ್ರಾಮದ ಯುವತಿ , ಅದೇ ಗ್ರಾಮದ  ಯುವಕನನ್ನು ಪ್ರೀತಿಸುತ್ತಿದ್ದು, ಆತನೊಂದಿಗೆ ಓಡಿಹೋಗಿದ್ದಳು.  ಯುವಕ ತಹಸೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ. ಈ ಸಂಬಂಧ ಯುವತಿಯ ತಂದೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಮಗಳು ನಾಪತ್ತೆಯಾದ ಬಗ್ಗೆ ದೂರು ಕೊಟ್ಟಿದ್ದರು. ಆದರೆ, ಆಕೆ ಸ್ವ ಇಚ್ಛೆಯಿಂದ ಆತನೊಂದಿಗೆ ಹೋಗಿರುವುದು ವಿಚಾರಣೆ ವೇಳೆ ತಿಳಿದು ಬಂತು. ತಂದೆ-ತಾಯಿಯ ನಾಲ್ಕು ಜನ ಹೆಣ್ಣುಮಕ್ಕಳ ಪೈಕಿ ಸುಶ್ಮಿತಾ ಕೊನೆಯವಳು. ಇದರಿಂದ ಮನನೊಂದ ತಂದೆ, ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ, ಊರವರಿಗೆ ಊಟ ಹಾಕಿಸಿ, ನನ್ನ ಮಗಳು ನಮ್ಮ ಪಾಲಿಗೆ ಸತ್ತಿದ್ದಾಳೆ ಎಂದು ಕರುಳ ಬಳ್ಳಿಯ ಸಂಬಂಧ ಕತ್ತರಿಸಿಕೊಂಡಿದ್ದಾರೆ.

PREV
Read more Articles on

Recommended Stories

ಬೆಳಗಾವಿಯಲ್ಲಿ ಕತ್ತಿ ವರ್ಸಸ್ ಜಾರಕಿಹೊಳಿ ಡಿಸಿಸಿ ಸಮರ
ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದ್ರೆ ಕ್ರಮ