ಬೆಳಗಾವಿ ಬಂದ್‌ ಮಾಡುವ ತಾಕತ್‌ ಇರೋದು ನಮಗೆ ಮಾತ್ರ : ಮರಾಠಿಯಲ್ಲಿ ಶಿವಸೇನೆಯ ಯುವ ಸೇನೆ ಪೋಸ್ಟ್‌

Published : Mar 24, 2025, 12:22 PM IST
shivasena

ಸಾರಾಂಶ

ಶಿವಸೇನೆಯ ಯುವ ಸೇನೆ ‘ಬೆಳಗಾವಿ ಬಂದ್‌ ಮಾಡುವ ತಾಕತ್ತು ಕೇವಲ ಮರಾಠಿಗರ ರಕ್ತದಲ್ಲಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು ಕನ್ನಡಿಗರನ್ನು ಕೆರಳಿಸಿದೆ.

ಬೆಳಗಾವಿ :ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಭಾನುವಾರ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ದೊರೆತ ಬೆನ್ನ ಹಿಂದೆಯೇ ಶಿವಸೇನೆಯ ಯುವ ಸೇನೆ ‘ಬೆಳಗಾವಿ ಬಂದ್‌ ಮಾಡುವ ತಾಕತ್ತು ಕೇವಲ ಮರಾಠಿಗರ ರಕ್ತದಲ್ಲಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು ಕನ್ನಡಿಗರನ್ನು ಕೆರಳಿಸಿದೆ. 

ಬೆಳಗಾವಿ ಬಂದ್‌ ಮಾಡುವ ತಾಕತ್ತು ಕೇವಲ ಮರಾಠಿಗರ ರಕ್ತದಲ್ಲಿದೆ. ಉಳಿದವರಿಂದ ಬಂದ್‌ ಸಾಧ್ಯ ಇಲ್ಲ ಎಂದು ಮರಾಠಿ ಭಾಷೆಯಲ್ಲಿ ಯುವಸೇನಾ ಬೆಳಗಾವಿ ತನ್ನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟ್ ಮಾಡಿದೆ. 

ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ ಎಂದು ಬೆಳಗಾವಿ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‌ ಎಚ್ಚರಿಕೆ ನೀಡಿದ್ದರೂ, ಶಿವಸೇನೆ ಪುಂಡರ ಪುಂಡಾಟಿಕೆ ಮುಂದುವರಿದಿದೆ. ವಿವಾದಾತ್ಮಕ ಪೋಸ್ಟ್ ಮಾಡಿರುವ ಯುವಸೇನಾ ಬೆಳಗಾವಿ ಇನ್‌ಸ್ಟಾಗ್ರಾಂ ಅಡ್ಮಿನ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

PREV

Recommended Stories

ಬೆಂಗಳೂರಿನಿಂದ ಬೆಳಗಾವಿಗೂ ಇನ್ನು ವಂದೇಭಾರತ್‌ ರೈಲು
ಲಿಂಬೆಹಣ್ಣು, ಮೊಸರನ್ನದ ಜೊತೆಗೆ ಸ್ಮಾರ್ಟ್‌ಫೋನ್ ಇಟ್ಟು ವಾಮಾಚಾರ!