ಬೆಳಗುಂಬ ವಿದ್ಯಾರ್ಥಿನಿಯರು ಬ್ಯಾಡ್ಮಿಂಟನ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

KannadaprabhaNewsNetwork |  
Published : Sep 25, 2026, 02:00 AM IST
ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಬ್ಯಾಡ್ಮಿಂಟನ್‌ಗೆ | Kannada Prabha

ಸಾರಾಂಶ

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಿವಸ್ವಾಮಿ ಅವರು ವಿದ್ಯಾರ್ಥಿಗಳಿಗೆ ನಿರಂತರ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಿರುವುದು ಅವರ ಕ್ರೀಡಾ ಸಾಧನೆಗೆ ಸಹಕಾರಿಯಾಗಿದೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರಿರುವ ವಿದ್ಯಾರ್ಥಿನಿಯರು ರಾಜ್ಯ ಮಟ್ಟದಲ್ಲೂ ತಮ್ಮ ಪ್ರತಿಭೆ ಪ್ರದರ್ಶಿಸಿ ಯಶಸ್ಸು ಗಳಿಸುವ ವಿಶ್ವಾಸವಿದೆ ಎಂದು ಶೈಲಾ ಹೇಳಿದರು.

ಕನ್ನಡಪ್ರಭವಾರ್ತೆ ಅರಸೀಕೆರೆ

ಕ್ರೀಡಾಕ್ಷೇತ್ರದಲ್ಲೂ ಗ್ರಾಮೀಣ ಪ್ರತಿಭೆಗಳು ಗಮನಾರ್ಹ ಸಾಧನೆ ಮಾಡುತ್ತಿದ್ದು, ತಾಲೂಕಿನ ಬೆಳಗುಂಬ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಮಹಿಳಾ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಾಲೆ ಆವರಣದಲ್ಲಿ ಈ ಕುರಿತು ಮಾತನಾಡಿದ ಮುಖ್ಯಶಿಕ್ಷಕಿ ಎನ್.ವಿ. ಶೈಲಾ, ವಿದ್ಯಾರ್ಥಿನಿಯರ ಸಾಧನೆಗೆ ಸಂತಸ ವ್ಯಕ್ತಪಡಿಸಿದರು. ಕ್ರೀಡೆಯ ಜತೆಗೆ ಶಿಕ್ಷಣದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು. ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಯಶಸ್ಸು ಸಾಧಿಸಿ ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಿವಸ್ವಾಮಿ ಅವರು ವಿದ್ಯಾರ್ಥಿಗಳಿಗೆ ನಿರಂತರ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಿರುವುದು ಅವರ ಕ್ರೀಡಾ ಸಾಧನೆಗೆ ಸಹಕಾರಿಯಾಗಿದೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರಿರುವ ವಿದ್ಯಾರ್ಥಿನಿಯರು ರಾಜ್ಯ ಮಟ್ಟದಲ್ಲೂ ತಮ್ಮ ಪ್ರತಿಭೆ ಪ್ರದರ್ಶಿಸಿ ಯಶಸ್ಸು ಗಳಿಸುವ ವಿಶ್ವಾಸವಿದೆ ಎಂದು ಶೈಲಾ ಹೇಳಿದರು.

ಕರ್ನಾಟಕ ರಾಜ್ಯ ಹಸಿರು ಪರಿಸರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಜಯಣ್ಣ ಬೆಳಗುಂಬ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ವಿದ್ಯಾರ್ಥಿನಿಯರು ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಶಿಕ್ಷಣದ ಜತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ಬೆಳೆಯಲು ಅಗತ್ಯ ಪ್ರೋತ್ಸಾಹ ನೀಡಬೇಕು. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ. ವಿದ್ಯಾರ್ಥಿಗಳ ಪ್ರತಿಭೆಗೆ ತಮ್ಮ ಸಹಕಾರ ಮುಂದುವರಿಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರ ಪರಿಹಾರ ಕಾಮಗಾರಿ ಕೈಗೊಳ್ಳಿ: ಪ್ರದೀಪ ಶೆಟ್ಟರ್‌
ರೈತರ ಬಿತ್ತನೆಗೆ ಬಿಸ್ಮಿಲ್ಲಾಹ ಬಲ: 28ಕ್ಕೂ ಹೆಚ್ಚು ಹೊಸ ಯಂತ್ರಗಳ ಸಿದ್ಧತೆ