ಬೆಳಗಾವಿ- ಬೆಂಗಳೂರು ವಂದೇ ಭಾರತ್‌ ರೈಲಿಗೆ ನಾಳೆ ಚಾಲನೆ

KannadaprabhaNewsNetwork |  
Published : Aug 09, 2025, 12:01 AM IST
ವಂದೇ ಭಾರತ ರೈಲು. | Kannada Prabha

ಸಾರಾಂಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ. 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಂದು ವಿಶೇಷ ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಒನ್‌ ವೇ), ಕೆಎಸ್‌ಆರ್ ಬೆಂಗಳೂರಿನಿಂದ 11:15 ಗಂಟೆಗೆ ಹೊರಡಲಿದೆ.

ಹುಬ್ಬಳ್ಳಿ: ಬೆಳಗಾವಿ ಜನರ ಬೇಡಿಕೆಯಂತೆ ಬೆಳಗಾವಿ- ಬೆಂಗಳೂರು ಮಧ್ಯೆ ವಂದೇ ಭಾರತ್‌ ಹೊಸ ರೈಲು ಆ. 10ರಂದು ಚಾಲನೆ ದೊರೆಯಲಿದ್ದು, ಆ. 11ರಿಂದ ಸಂಚರಿಸಲಿದೆ. ಉತ್ತರ ಕರ್ನಾಟಕದಿಂದ ರಾಜಧಾನಿಗೆ ಮತ್ತೊಂದು ವಂದೇ ಭಾರತ್‌ ರೈಲು ಪರಿಚಯವಾದಂತಾಗುತ್ತದೆ.

ರೈಲು ಸಂಖ್ಯೆ 26752/26751 ಹೊಸ ವಂದೇ ಭಾರತ್‌ ರೈಲು ಸಂಚರಿಸಲಿದೆ. ಅರೆ-ಹೈಸ್ಪೀಡ್ ರೈಲು ಸೇವೆ ಬುಧವಾರ ಹೊರತುಪಡಿಸಿ, ವಾರದಲ್ಲಿ ಆರು ದಿನಗಳು ಸಂಚರಿಸಲಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ. 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಂದು ವಿಶೇಷ ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಒನ್‌ ವೇ), ಕೆಎಸ್‌ಆರ್ ಬೆಂಗಳೂರಿನಿಂದ 11:15 ಗಂಟೆಗೆ ಹೊರಡಲಿದೆ. ಯಶವಂತಪುರ, ತುಮಕೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಧಾರವಾಡ ನಿಲ್ದಾಣಗಳಲ್ಲಿ ನಿಲುಗಡೆಗೊಂಡು ಅದೇ ದಿನ ರಾತ್ರಿ 8 ಗಂಟೆಗೆ ಬೆಳಗಾವಿಗೆ ತಲುಪಲಿದೆ.

ರೈಲು ಸಂಖ್ಯೆ 26751/26752ರ ನಿಯಮಿತ ಸೇವೆಗಳು ಆ. 11ರಿಂದ ಪ್ರಾರಂಭವಾಗಲಿವೆ. ರೈಲು ಸಂಖ್ಯೆ 26751 ಬೆಳಗಾವಿ - ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಡಲಿದ್ದು, ಮಧ್ಯಾಹ್ನ 1.50ಕ್ಕೆ ಕೆಎಸ್‌ಆರ್‌ ಬೆಂಗಳೂರು ತಲುಪಲಿದೆ. ಧಾರವಾಡ (7:08/7:10 ಗಂಟೆ), ಎಸ್ಎಸ್ಎಸ್ ಹುಬ್ಬಳ್ಳಿ (7:30/7:35 ಗಂಟೆ), ಎಸ್ಎಂಎಂ ಹಾವೇರಿ (8:35/8:37 ಗಂಟೆ), ದಾವಣಗೆರೆ (9:25/9:27 ಗಂಟೆ), ತುಮಕೂರು (12:15/12:17 ಗಂಟೆ) ಮತ್ತು ಯಶವಂತಪುರ (1:03/1:05 ಗಂಟೆ) ನಿಲ್ದಾಣಗಳಲ್ಲಿ ನಿಲ್ಲಲಿದೆ.

ಮರಳಿ ಪ್ರಯಾಣಿಸುವಾಗ, ರೈಲು ಸಂಖ್ಯೆ 26752 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರಿನಿಂದ ಮಧ್ಯಾಹ್ನ 2:20 ಗಂಟೆಗೆ ಹೊರಟು, ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಮಾರ್ಗಮಧ್ಯೆ ಯಶವಂತಪುರ (2:28/2:30 ಗಂಟೆ), ತುಮಕೂರು (3:03/3:05 ಗಂಟೆ), ದಾವಣಗೆರೆ (5:48/5:50 ಗಂಟೆ), ಎಸ್ಎಂಎಂ ಹಾವೇರಿ (6:48/6:50 ಗಂಟೆ), ಎಸ್ಎಸ್ಎಸ್ ಹುಬ್ಬಳ್ಳಿ (8/8:05 ಗಂಟೆ) ಮತ್ತು ಧಾರವಾಡ (8:25/8:27 ಗಂಟೆ) ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ರೈಲು 8 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 4 ಮೋಟರ್ ಕಾರ್‌ಗಳು, 1 ಟ್ರೈಲಿಂಗ್ ಕಾರ್, 1 ಎಕ್ಸಿಕ್ಯುಟಿವ್ ಕ್ಲಾಸ್/ಟ್ರೈಲಿಂಗ್ ಕಾರ್ ಮತ್ತು 2 ಡ್ರೈವಿಂಗ್ ಟ್ರೈಲರ್ ಕಾರ್‌ಗಳು ಇರಲಿವೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ