ಕನ್ನಡಪ್ರಭ ವಾರ್ತೆ ಬೆಳಗಾವಿ
ಅದ್ಧೂರಿ ಗಣೇಶೋತ್ಸವಕ್ಕೆ ಹೆಸರುವಾಸಿಯಾಗಿರುವ ಬೆಳಗಾವಿಯಲ್ಲಿ ಈ ಬಾರಿ ಮುಂಬೈನೂ ಮೀರಿ ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆದಿದೆ. ಸೆ.6ರಂದು ಸಂಜೆ 4 ಗಂಟೆಗೆ ಆರಂಭವಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ಸೋಮವಾರ ಬೆಳಗಿನ ಜಾವ ಸುಮಾರು 6.30 ರವರೆಗೂ ನಡೆದಿದೆ. ಮುಂಬೈನಲ್ಲಿ 35 ಗಂಟೆಗಳ ಕಾಲ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆದರೆ, ಬೆಳಗಾವಿಯಲ್ಲಿ 38 ಗಂಟೆಗಳ ಕಾಲ ನಿರಂತರವಾಗಿ ಗಣೇಶ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ ನೆರವೇರಿದೆ. ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಶೀಘ್ರದಲ್ಲೇ ವಿವಿಧೆಡೆಗಳಲ್ಲಿ ಹೊಂಡದಲ್ಲಿ ವಿಸರ್ಜನೆಯಾದ ಗಣಪತಿ ಮೂರ್ತಿಗಳ ವಿಲೇವಾರಿಗೆ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ.ಡಿಜೆ ಜಪ್ತಿ:
ಗಣೇಶ ಮೂರ್ತಿಗಳ ವಿಸರ್ಜನಾ ಮೆವರಣಿವೇಳೆ ವೇಳೆ ಜೈ ಜೈ ಮಹಾರಾಷ್ಟ್ರ ಹಾಕಿದ್ದ ಡಿಜೆ ಆಪರೇಟರ್‌ಗೆ ನಡೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆತ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾನೆ. ಇನ್ನೊಮ್ಮೆ ಈ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾನೆ.