ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದಿಂದ ವಿಶಾಖಪಟ್ಟಣದಲ್ಲಿ ನಡೆದ ಸಮಾರಂಭದಲ್ಲಿ ಸುಮನ್ ಅಜ್ಜಿ ಅವರನ್ನು ಒಂದು ವರ್ಷದ ಅವಧಿಗೆ ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಿಸಲಾಗಿದೆ. ಇದು ಬೆಳಗಾವಿಗೆ ಹೆಮ್ಮೆಯ ಸಂಗತಿ ಎಂದರು.
ವಿಶಾಖಪಟ್ಟಣದಲ್ಲಿ ನಡೆದ 10 ಸಾವಿರ ಸೈಕ್ಲಿಂಗ್ ಕ್ರೀಡಾಕೂಟಕ್ಕೆ ಸುಮನ್ ಅಜ್ಜಿ ಚಾಲನೆ ನೀಡಿದ್ದು, ಹಿರಿಯ ನಾಗರಿಕರಲ್ಲಿಯೂ ಆರೋಗ್ಯಕರ ಜೀವನಶೈಲಿ ಸಾಧ್ಯ ಎಂಬ ಸಂದೇಶವನ್ನು ದೇಶಕ್ಕೆ ನೀಡಲಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ರಾಜು ಗೌವಳಿ, ಸಂತೋಷ ಮಮದಾಪುರ, ಮಾರಿಯಾ ಮೋರೆ, ಶರಲ್ ಮೋರೆ, ಅಲೇನ್ ಮೋರೆ, ಗಂಗಾಧರ ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.