ಬೆಳ್ಳೂರು-ಕೋಣಗೇರಿ: ಚೆಕ್ ಡ್ಯಾಮ್ ನಿರ್ಮಾಣಕ್ಕೆ ಶಾಸಕ ಭೂಮಿಪೂಜೆ

KannadaprabhaNewsNetwork |  
Published : Feb 08, 2026, 03:15 AM IST
ಚಿತ್ರ : 2ಎಂಡಿಕೆ2 : ಬೆಳ್ಳೂರು-ಕೋಣಗೇರಿ ಗ್ರಾಮದಲ್ಲಿ ಶಾಸಕ ಪೊನ್ನಣ್ಣ ಭೂಮಿ ಪೂಜೆ. | Kannada Prabha

ಸಾರಾಂಶ

ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳೂರು ಕೋಣಗೇರಿಯಲ್ಲಿ ಅಜ್ಜಿಕುಟ್ಟಿರ ಕುಟುಂಬಸ್ಥರ ಭಾಗದಲ್ಲಿ, ಹರಿದು ಹೋಗುವ ತೋಡಿಗೆ ಚೆಕ್ ಡ್ಯಾಮ್ ನಿರ್ಮಿಸುವ ಕಾಮಗಾರಿಗೆ ಭೂಮಿ ಪೂಜೆಯನ್ನು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳೂರು ಕೋಣಗೇರಿಯಲ್ಲಿ ಅಜ್ಜಿಕುಟ್ಟಿರ ಕುಟುಂಬಸ್ಥರ ಭಾಗದಲ್ಲಿ, ಹರಿದು ಹೋಗುವ ತೋಡಿಗೆ ಚೆಕ್ ಡ್ಯಾಮ್ ನಿರ್ಮಿಸುವ ಕಾಮಗಾರಿಗೆ ಭೂಮಿ ಪೂಜೆಯನ್ನು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಗುರುವಾರ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಈ ಯೋಜನೆಯಡಿ, ಪೊನ್ನಂಪೇಟೆ ತಾಲೂಕಿಗೆ ರು.10 ಕೋಟಿ ಅನುದಾನ ಒದಗಿದ್ದು, ಈ ಭಾಗದಲ್ಲಿ ರು. 1. 50 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನಂತರ ಈ ಭಾಗದ ಪ್ರಸಿದ್ಧ ಶ್ರೀ ಭದ್ರಕಾಳಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ, ಶಾಸಕರು ವೈಯುಕ್ತಿಕ ರು. 3 ಲಕ್ಷ ನೆರವು ನೀಡಿದರು.

ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ಚಂಗುಲಂಡ ಸೂರಜ್, ಪ್ರಚಾರ ಸಮಿತಿಯ ಅಧ್ಯಕ್ಷ ಅಪಟ್ಟಿರ ಟಾಟು ಮೊಣ್ಣಪ್ಪ, ರಾಜ್ಯ ಮಹಿಳಾ ಘಟಕದ ಪ್ರದಾನ ಕಾರ್ಯದರ್ಶಿ ಕೊಕ್ಕಂಡ ರೂಪಾ ಭೀಮಯ್ಯ, ಅಜ್ಜಿಕುಟ್ಟಿರ ಗಿರೀಶ್, ನೂರೆರ ರಮೇಶ್, ಮನೋಹರ್, ರೀಕ್ಷಿತ್ ಬಲ್ಯಮಾಡ, ಮದನ್ ಮಂದಣ್ಣ ಮರಮಾಡ, ಅಣ್ಣಳಮಾಡ ಹರೀಶ್, ಇಟ್ಟಿರ ಭವಿನ್, ಅಂಟೋನಿ, ಅಯೂಬ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ